Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ತೆಕ್ಕೆಗೆ ಇಂಡಿ ಪುರಸಭೆ :ಬಿಜೆಪಿಗೆ ತೀವ್ರ ಮುಖಭಂಗ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ತೆಕ್ಕೆಗೆ ಇಂಡಿ ಪುರಸಭೆ :ಬಿಜೆಪಿಗೆ ತೀವ್ರ ಮುಖಭಂಗ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಹೆಚ್ಚಿನ ಸದಸ್ಯರಿದ್ದರೂ ಪುರಸಭೆ ಗದ್ದುಗೆ ಹಿಡಿಯುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದ್ದು, ೮ ಸದಸ್ಯರ ಬಲ ಹೊಂದಿದ ಕಾಂಗ್ರೇಸ್ ಪಕ್ಷ ಪುರಸಭೆಯ ಗದ್ದುಗೆ ಏರಿದ್ದರಿಂದ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.
೨೩ ಸದಸ್ಯರ ಬಲ. ಓರ್ವ ಸಂಸದ, ಓರ್ವ ಶಾಸಕರ ಬಲ ಸೇರಿ ಒಟ್ಟು ೨೫ ಸಂಖ್ಯಾಬಲ ಹೊಂದಿದ ಇಂಡಿ ಪುರಸಭೆ ಸೋಮವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೇಸ್ ತೆಕ್ಕೆಗೆ ಸೇರಿಕೊಂಡು, ಬಿಜೆಪಿಗೆ ಭಾರಿ ನಿರಾಸೆ ಅನುಭವಿಸುವಂತಾಗಿದೆ.
ಕಾಂಗ್ರೇಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಸ್ಥಾನಕ್ಕೆ ಜಹಾಂಗೀರ ಸೌದಾಗರ ನಾಮಪತ್ರ ಸಲ್ಲಿಸಿದರೆ, ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸಾಯಬಣ್ಣ ವಾಸುದೇವ ಮೂರಮನ್, ಉಪಾಧ್ಯಕ್ಷ ಸ್ಥಾನಕ್ಕೆ ರೇಣುಕಾ ತಿಪ್ಪಣ್ಣ ಉಟಗಿ ನಾಮಪತ್ರ ಸಲ್ಲಿಸಿದ್ದರು.
ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷ ಸ್ಪರ್ಧಿಗಳ ಪೈಕಿ ೧೫ ಮತಗಳು ಲಭಿಸಿದರೆ, ಬಿಜೆಪಿ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಕೇವಲ ೬ ಮತಗಳು ಲಭಿಸಿದವು. ಹೀಗಾಗಿ ಹೆಚ್ಚಿಗೆ ಮತ ಪಡೆದ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಸ್ಥಾನದ ಜಹಾಂಗೀರ ಸೌದಾಗರ ಅವರ ಗೆಲುವು ೧೫ ಮತಗಳ ಅಂತರದಿಂದ ಆಗಿದೆ ಎಂದು ಚುನಾವಣಾ ಅಧಿಕಾರಿ, ತಹಸೀಲ್ದಾರ ಬಿ.ಎಸ್. ಕಡಕಭಾವಿ ಘೋಷಿಸಿದರು.
ಸಂಭ್ರಮಾಚರಣೆ: ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೇಸ್ ಕಾರ್ಯಕರ್ತರು ಗುಲಾಲು ಎರಚಿ , ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಬಿಜೆಪಿಗೆ ಮುಖಭಂಗ: ೧೧ ಸದಸ್ಯರ ಬಲವಿದ್ದರೂ ಬಿಜೆಪಿ ಪಕ್ಷ ತನ್ನ ಪಕ್ಷದ ಸದಸ್ಯರ ಮತಗಳನ್ನೇ ಪಡೆಯುವಲ್ಲಿ ವಿಫಲವಾಗಿದ್ದು ಸ್ಥಳೀಯ ನಾಯಕರ ಒಗ್ಗಟ್ಟಿನ ಕೊರತೆ ಹಾಗೂ ಸದಸ್ಯರ ಭಿನ್ನಾಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ದಟ್ಟವಾಗಿ ಮಾತನಾಡುವ ಪರಿಸ್ಥಿತಿಗೆ ತಲುಪಿದವು.
ಕೊನೆಗೆ ಬಿಜೆಪಿ ಕಾರ್ಯಕರ್ತರೆ ತಮ್ಮ ಪಕ್ಷದ ಮುಖಂಡರ ನಿಷ್ಕಾಳಜಿಯ ಬಗ್ಗೆ ಮಾತನಾಡಿಕೊಳ್ಳುತ್ತಿರುವುದು ಕಂಡು ಬಂತು. ಬಿಜೆಪಿ ಪಕ್ಷದಲ್ಲಿ ನಾಯಕತ್ವದ ಕೊರತೆಯಿಂದಲೇ ಈ ರೀತಿಯಾಗುತ್ತಿದೆ. ಸ್ಥಳೀಯ ಶಾಸಕ ಯಶವಂತ್ರಾಯಗೌಡ ಪಾಟೀಲರ ಚಾಣಾಕ್ಷ ನಡೆಯಿಂದ ಪ್ರತಿ ಬಾರಿಯೂ ಬಿಜೆಪಿ ಪಕ್ಷಕ್ಕೆ ಮುಖಭಂಗವಾಗುತ್ತಿದೆ. ಬಿಜೆಪಿ ಪಕ್ಷದ ಸದಸ್ಯರು ತಮ್ಮ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದ್ದವು.
ಬಿಜೆಪಿ ಸದಸ್ಯರ ಪ್ರಾಥಮಿಕ ಸದಸ್ಯತ್ವ ಉಚ್ಛಾಟನೆ:
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬಿಜೆಪಿ ಪುರಸಭೆ ಸದಸ್ಯರಾದ ಸೈಪನ್ ಪವಾರ, ಜ್ಯೋತಿ ಪ್ರಕಾಶ ರಾಠೋಡ, ಕವಿತಾ ಜಯಚಂದ್ರ ರಾಠೋಡ ಅವರನ್ನು ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ಚುನಾವಣೆಗೆ ಟಿಕೆಟ್ ಕೇಳಲು ಬಿಜೆಪಿ ಪಕ್ಷದಿಂದ ಹತ್ತಾರು ಅಭ್ಯರ್ಥಿಗಳು ಪೈಪೋಟಿ ನಡೆಸುತ್ತಾರೆ. ಆದರೆ ಇಂತಹ ಚುನಾವಣೆಯಲ್ಲಿ ತಮಗೆ ಸಂಬಂಧವಿಲ್ಲದಂತೆ ಕೂಡುತ್ತಾರೆ. ಹೀಗಾಗಿ ಇಲ್ಲಿ ಓರ್ವ ಸಮರ್ಥ ನಾಯಕನ ಆಗಮನದವರೆಗೂ ಬಿಜೆಪಿಗೆ ಇಂಡಿ ಕ್ಷೇತ್ರದಲ್ಲಿ ಮನ್ನಣೆ ಸಿಗಲ್ಲ ಎಂಬುದು ಅದೇ ಪಕ್ಷದ ಕಾರ್ಯಕರ್ತರ ಮಾತಾಗಿದೆ.

ಸೋಮವಾರ ನಡೆದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ೧೫ ಮತಗಳನ್ನು ಪಡೆಯುವ ಮೂಲಕ ಬಿಜೆಪಿಗೆ ಹೀನಾಯ ಸೋಲಿನ ಬಿಸಿ ಮುಟ್ಟಿಸಿದ್ದಾರೆ. ನಗರ ನಿವಾಸಿಗಳು ಬಿಜೆಪಿ ಗೆಲುವಿನ ಬಗ್ಗೆ ಅತ್ಯಂತ ವಿಸ್ವಾಸದ ಹಾಗೂ ನಿರೀಕ್ಷೆಯಿಟ್ಟುಕೊಂಡಿದ್ದರು. ಮ್ಯಾಜಿಕ್ ನಂಬರ್ ೧೩ ಇದ್ದರೆ, ಬಿಜೆಪಿಯಲ್ಲಿ ೧೧, ಜೆಡಿಎಸ್ ೨ ಹಾಗೂ ಸತತ ಗೆಲುವಿನ ನಗೆಯಲ್ಲಿರುವ ಚಾಣಾಕ್ಷ ಲೋಕಸಭಾ ಸದಸ್ಯ ಸೇರಿದಂತೆ ೧೪ ಮತಗಳನ್ನು ಪಡೆದು ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಲೋಕಸಭಾ ಸದಸ್ಯರ ಚಾಣಾಕ್ಷ ನೀತಿ, ಬಿಜೆಪಿ ಪಕ್ಷದ ನಾಯಕರ ದಂಡು ಹಾಗೂ ಮೈತ್ರಿ ಪಕ್ಷದ ಶಕ್ತಿ ಮೇಲೆ ಜನರು ವಿಶ್ವಾಸವಿಟ್ಟಿದ್ದರು. ಆದರೆ ಬಿಜೆಪಿ ಕಾರ್ಯಕರ್ತರಲ್ಲಿ ನಿರಾಸೆ ತಂದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.