ಚಿಕ್ಕಪಡಸಲಗಿ: ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ನಿಖಿತಾ ಸುರೇಶ ಗವರೋಜಿ 2023-24 ನೇ ಸಾಲಿನ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಪಾಸಾದ ಕಾರಣ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾ೯ಲಯ ಜಮಖಂಡಿ ಹಾಗೂ ಮಧುರಖಂಡಿಯ ಸಾಯಿ ಸಂಕಲ್ಪ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023-24 ನೇ ಸಾಲಿನ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಪ್ರತಿಭಾವಂತ ಪ್ರತಿಭೆಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕವಟಗಿ ಗ್ರಾಮದ ಪ್ರತಿಭಾವಂತೆ ವಿದ್ಯಾರ್ಥಿನಿ ಕುಮಾರಿ ನಿಖಿತಾ ಗವರೋಜಿ ಪ್ರಸ್ತುತ ಚಿಕ್ಕಪಡಸಲಗಿ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಬಾಲೆಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಗದುಗಿನ ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು, ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ,ಶಿವಾನಂದ ಪಟ್ಟಣಶೆಟ್ಟರ ಶಿಕ್ಷಣ ತಜ್ಞರು, ಪ್ರಭಾರ ಮುಖ್ಯ ಶಿಕ್ಷಕ ಬಸವರಾಜ ಜಾಲೋಜಿ, ವಿಶ್ರಾಂತ ಹಿರಿಯ ಮಾರ್ಗದಶಿ೯ ಶಿಕ್ಷಕ ಬಸವರಾಜ ಅನಂತಪುರ ಸೇರಿದಂತೆ ಸ್ಥಾನಿಕ ಆಡಳಿತ ಮಂಡಳಿ ಸದಸ್ಯರು, ಶಾಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

