ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದ್ದ ಹುದ್ದೆಗಳಿಗೆ ಜಿಲ್ಲೆಯ ೮ ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಪೂರ್ವಭಾವಿ ಪರೀಕ್ಷೆಗೆ ಒಟ್ಟು ೪೦೦೭ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು.
ಬಾಲಕರ ಸರಕಾರಿ ಪದವಿಪೂರ್ವ ಕಾಲೇಜ್, ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜ್, ವಿದ್ಯಾನಿಕೇತನ ಪ.ಪೂ. ಕಾಲೇಜ್, ಬಿಡಿಇ ಬಾಲಕಿಯರ ಪ್ರೌಢಶಾಲೆ, ಪಿಡಿಜೆ ಪ್ರೌಢಶಾಲೆ, ಸರಕಾರಿ ಪಾಲಿಟೆಕ್ನಿಕ್ ಕಾಲೇಜ್, ವ್ಹಿ.ಬಿ.ದರಬಾರ ಪ.ಪೂ.ಕಾಲೇಜ್ ಹಾಗೂ ಅಂಜುಮನ್ ಕಲಾ & ವಾಣಿಜ್ಯ ಮಹಾವಿದ್ಯಾಲಯ ಸೇರಿದಂತೆ ಒಟ್ಟು ೮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಿದ್ದು, ಪತ್ರಿಕೆ-೧ಕ್ಕೆ ೨೯೨೮ ಹಾಗೂ ಪತ್ರಿಕೆ-೨ಕ್ಕೆ ೨೯೧೪ ಅಭ್ಯರ್ಥಿಗಳು ಹಾಜರಾಗಿ, ಪತ್ರಿಕೆ-೧ಕ್ಕೆ ೧೦೭೯ ಹಾಗೂ ಪತ್ರಿಕೆ-೨ಕ್ಕೆ ೧೦೯೩ ಅಭ್ಯರ್ಥಿಗಳು ಗೈರು ಹಾಜರಾಗಿದ್ದರು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
