ವಿಜಯಪುರ: ಜಿಲ್ಲೆಯ ೦೮ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ ಬಿ ವೃಂದದ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಅಂಜುಮನ್ ಕಾಲೇಜ್, ಪಾಲಿಟೆಕ್ನಿಕ್ ಕಾಲೇಜ್, ಬಿಡಿಇ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚನೆ ನೀಡಿದರು.
Subscribe to Updates
Get the latest creative news from FooBar about art, design and business.
ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ
Related Posts
Add A Comment

