ದೇವರಹಿಪ್ಪರಗಿ: ಗಣೇಶನ ಪ್ರತಿಷ್ಠಾಪನೆಯಿಂದ ವಿಸರ್ಜನೆವರೆಗಿನ ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವುದರ ಮೂಲಕ ಮಹಾಮಂಡಳಿ ಹಾಗೂ ಯುವಕ ಸಂಘಗಳು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ಸಿಪಿಆಯ್ ಆನಂದರಾವ್ ಎಸ್.ಎನ್ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ನಿಮಿತ್ಯವಾಗಿ ಸೋಮವಾರ ಜರುಗಿದ ಶಾಂತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಟಣ ಶಾಂತಿ, ಸೌಹಾರ್ದತೆಗೆ ಹೆಸರಾಗಿದೆ. ಇದನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಎಲ್ಲರೂ ಸರ್ಕಾರದ ನಿಯಮಾವಳಿ ಪಾಲನೆ ಮಾಡಬೇಕು. ಯಾವುದೇ ಅನಗತ್ಯ ವಿಷಯಗಳತ್ತ ಗಮನ ನೀಡದೇ, ಶಿಸ್ತು, ಸಹನೆಯಿಂದ ಹಬ್ಬಗಳ ಆಚರಣೆಗೆ ಮುಂದಾಗಬೇಕು ಎಂದರು.
ಪಿಎಸೈ ಬಸವರಾಜ ತಿಪ್ಪಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆಯಾಗಿ ಸಾರ್ವಜನಿಕರಿಗೆ ಸ್ಪಂದಿಸುತ್ತಿದೆ. ಯಾವುದೇ ಕಾರಣಕ್ಕೂ ಸಮಾಜದ ಶಾಂತಿ ಕದಡುವ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ. ಪಟ್ಟಣದ ಎಲ್ಲ ಗಣೇಶ ಮಹಾಮಂಡಳಿಗಳಿಗೆ ಹೆಸ್ಕಾಂ, ಪಟ್ಟಣ ಪಂಚಾಯಿತಿ ಸೇರಿದಂತೆ ಪೊಲೀಸ್ ಇಲಾಖೆಯ ಸಂಪೂರ್ಣ ಸಹಕಾರವಿದ್ದು, ಗಣೇಶ ಯುವಕ ಮಂಡಳಿಗಳು ಇಲಾಖೆಯ ನಿಯಮಾವಳಿಗಳನ್ನು ಪಾಲಿಸಬೇಕು ಎಂದರು.
ಮಹಾಮಂಡಳ ಹಾಗೂ ಸಾರ್ವಜನಿಕರ ಪರವಾಗಿ ಸಿ.ಕೆ.ಕುದರಿ, ಮಹಿಬೂಬ್ ಹುಂಡೇಕಾರ, ಶಂಕರಗೌಡ ಪಾಟೀಲ, ಅಜೀಜ್ ಯಲಗಾರ ಮಾತನಾಡಿದರು.
ಮಹಿಳಾ ಪಿಎಸ್‌ಐ ಪಿ.ಎಮ್.ಚೌರ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ (ಜಲಕತ್ತಿ), ಕಾಸು ಜಮಾದಾರ ನಾಮನಿರ್ದೇಶಿತ ಸದಸ್ಯರಾದ ಹುಸೇನ್ ಕೊಕಟನೂರ, ಸುನೀಲ ಕನಮಡಿ, ಸೇರಿದಂತೆ ಬಾಬುಗೌಡ ಪಾಟೀಲ(ಜಿಡ್ಡಿಮನಿ), ಹುಸೇನ್ ಗೌಂಡಿ, ಕಾಸು ವಡ್ಡೋಡಗಿ, ಎಸ್.ವೈ.ನಾಯ್ಕೋಡಿ, ಬಸವರಾಜ ತಳಕೇರಿ, ಶಬ್ಬೀರ್ ಮುಲ್ಲಾ, ಎ.ಎಚ್.ಜಮಾದಾರ, ಭೀಮು ಚವ್ಹಾಣ, ಸುರೇಶ ಒಂಟೆತ್ತೀನ, ನಾಗಪ್ಪ ಬಂಡಿವಡ್ಡರ, ಪ್ರಕಾಶ ತಳಕೇರಿ, ಕಾಶೀನಾಥ ಚವ್ಹಾಣ ಸಹಿತ ಪೊಲೀಸ್ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

