ಸಿಂದಗಿ: ಶಿಕ್ಷಣ ನಮ್ಮ ಬದುಕಿಗೆ ಎಷ್ಟು ಮುಖ್ಯವೋ ಸಂಸ್ಕಾರವೂ ಕೂಡ ಅಷ್ಟೇ ಮುಖ್ಯವಾದದ್ದು ಎಂದು ತಿಂಥಣಿ ಬ್ರಿಡ್ಜ್ ಕಾಗಿನೆಲೆ ಮಹಾಸಂಸ್ಥಾನ ಶಾಖಾಮಠದ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲೂಕಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತ್ಯೋತ್ಸವ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕುಟುಂಬದಲ್ಲಿ ಪಾಲಕರು ಶಾಲೆಯಲ್ಲಿ ಶಿಕ್ಷಕರು ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ನೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಅತ್ಯಂತ ಮಹತ್ವದ ಕಾರ್ಯ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂತಹ ಸ್ವಾಭಿಮಾನದ ವೀರರು ಪ್ರತಿಯೊಂದು ಮನೆಯಲ್ಲಿ ಜನಿಸುವಂತಾಗಬೇಕು ಎಂದರು.
ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ಮಾತನಾಡಿ, ಪ್ರತಿಯೊಂದು ತಾಲೂಕಿನಲ್ಲಿ ಇಂತಹ ಕಾರ್ಯಕ್ರಮಗಳು ಜರುಗುವಂತಾಗಬೇಕು. ಇದರಿಂದ ಮಕ್ಕಳಿಗೆ ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಮತ್ತು ಅವರ ಪ್ರತಿಭೆಗೆ ನಾವು ಗೌರವಿಸಿದಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ, ಬಿ.ಟಿ.ಗೌಡರ ಮಾತನಾಡಿದರು.
ಜಕ್ಕಣ್ಣ ಮಾಸ್ತರ ಮೀಸಿ ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ರಾಯಪ್ಪ ಇವಣಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ೬೦ಕ್ಕೂ ಅಧಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ನಿವೃತ್ತ ನೌಕಕರು ಹಾಗೂ ಹೊಸದಾಗಿ ನೇಮಕಗೊಂಡ ನೌಕರರಿಗೆ ಸನ್ಮಾನಿಸಲಾಯಿತು. ಗೀತಾ ಅಥಣಿ ಪ್ರಾರ್ಥಿಸಿದರು. ಎಸ್.ಎಸ್.ಸಾತಿಹಾಳ ಸ್ವಾಗತಿಸಿದರು. ಆರ್.ಕೆ.ಪಾಟೀಲ ನಿರೂಪಿಸಿದರು. ಪಿ.ಎಸ್.ಅಗ್ನಿ ವಂದಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪುರ ಜಿಲ್ಲಾ ವಿಭಾಗಿಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಕೆಪಿಟಿಸಿಎಲ್ ಎಇಇ ಡಿ.ಎಮ್.ಮೂಲಿಮನಿ, ಎಂ.ಎಂ.ತಡಲಗಿ, ಬಿ.ಎಸ್.ಅಳ್ಳಿಚಂಡಿ, ಬಿ.ವೈ.ಗೌಡರ, ವೈ.ಟಿ.ಪಾಟೀಲ, ಹಿರೆಕುರುಬರ, ಎಸ.ಎಲ್.ಮಾನೆ, ಎ.ಎಲ್.ಗಂಗೂರ, ಬಿ.ಎಸ್.ಶೇಖಣ್ಣವರ, ಎಸ್.ವೈ.ಬೀರಗೊಂಡ, ಎಂ.ವೈ.ಪೂಜಾರಿ, ಎ.ಆರ್.ಮಾಶಾಳ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಶಿಕ್ಷಣದ ಜೊತೆಗೆ ಸಂಸ್ಕಾರವೂ ಮುಖ್ಯ :ಸಿದ್ದರಾಮನಂದಪುರಿ ಶ್ರೀ
Related Posts
Add A Comment

