ಬಸವನಬಾಗೇವಾಡಿ: ಬಾಲ್ಯದಲ್ಲಿಯೇ ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಶಾಲಾ ಹಂತದ ಕ್ರೀಡಾಕೂಟ ಸಹಕಾರಿಯಾಗಿದೆ. ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಮುನ್ನೆಲೆಗೆ ತರುವಲ್ಲಿ ಪಂಚಾಯತ ಮಟ್ಟದ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು.
ತಾಲೂಕಿನ ಕಾನ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರಸಮನ್ವಾಧಿಕಾರಿಗಳ ಕಾರ್ಯಾಲಯ, ಜಾಯವಾಡಗಿಯ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕಾನ್ನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಣಕಾಲ ಪಂಚಾಯತ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹಂತ ಹಂತವಾಗಿ ಯಶಸ್ವಿಗೊಳಿಸಬೇಕೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯುವ ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಗಂಭೀರವಾಗಿ ಪರಿಗಣಿಸದೇ ಸ್ಪರ್ಧಾತ್ಮಕವಾಗಿ ಭಾಗವಹಿಸುವದು ತುಂಬಾ ಮುಖ್ಯವಾಗಿದೆ. ಪ್ರತಿಭೆ ಎಲ್ಲ ವಿದ್ಯಾರ್ಥಿಗಳಲ್ಲಿ ಇರುತ್ತದೆ ಇದನ್ನು ಪತ್ತೆ ಹಚ್ಚಿ ಪ್ರೋತ್ಸಾಹಿಸುವ ಕಾರ್ಯವನ್ನು ಪಾಲಕರು, ಶಿಕ್ಷಕರು ಮಾಡಬೇಕು. ಸೂಕ್ತ ಪ್ರತಿಭೆಗಳಿಗೆ ನಿರ್ಣಾಯಕರು ತಮ್ಮ ಪ್ರಾಮಾಣಿಕವಾದ ನಿರ್ಣಯ ಕೊಡುವ ಮೂಲಕ ಪ್ರತಿಭೆಗೆ ನ್ಯಾಯ ಒದಗಿಸಬೇಕೆಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ.ನಾಗಾವಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಿರಂತರ ಅಧ್ಯಯನದೊಂದಿಗೆ ಪಠೇತ್ಯರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಸೂಪ್ತ ಪ್ರತಿಭೆಯನ್ನು ಅನಾವರಣ ಮಾಡಬೇಕು. ಸದೃಢವಾದ ದೇಹ ಇದ್ದರೆ ಸದೃಢವಾದ ಮನಸ್ಸು ಇರುತ್ತದೆ. ನಿರಂತರ ವ್ಯಾಯಾಮ, ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಸದೃಢವಾದ ದೇಹ ಇಟ್ಟುಕೊಳ್ಳುವ ಜೊತೆಗೆ ಆರೋಗ್ಯಕರವಾಗಿರಬಹುದು. ಆರೋಗ್ಯವಾಗಿದ್ದರೆ ಅಧ್ಯಯನವು ಚೆನ್ನಾಗಿ ನಡೆಯುತ್ತದೆ. ಇದರಿಂದ ವಿದ್ಯಾರ್ಥಿಗಳು ಸರ್ವಾಂಗೀಣ ವ್ಯಕ್ತಿತ್ವವನ್ನು ತಮ್ಮದಾಗಿಸಿಕೊಳ್ಳಬಹುದು ಎಂದರು.
ಅಧ್ಯಕ್ಷತೆಯನ್ನು ವೈ.ಆರ್.ಮೇಲಿನಮನಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ.ಎಸ್.ಅಂಗಡಿ, ಬಿ.ಎಸ್.ಓದಿ, ಎನ್.ಬಿ.ಹಿರೇಮಠ, ಪಿ.ಎಂ.ಚಿತ್ತರಗಿ, ಪಿ.ವೈ.ಹರಿಜನ, ಆರ್.ಆರ್.ಮೇಲಿನಮನಿ, ಎ.ಬಿ.ನಾಯಕ, ಎಸ್.ಪಿ.ಸಜ್ಜನ, ನಿಂಗಯ್ಯ ಮಠ, ರಿಶಿನಾ ಇತರರು ಇದ್ದರು. ಜೆ.ಬಿ.ಹಳಿಮನಿ ಸ್ವಾಗತಿಸಿ,ನಿರೂಪಿಸಿದರು.
ನಂತರ ಕಣಕಾಲ ಪಂಚಾಯಿತಿ ಮಟ್ಟದಲ್ಲಿರುವ ಎಲ್ಲ ಪ್ರಾಥಮಿಕ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿದರು.
Subscribe to Updates
Get the latest creative news from FooBar about art, design and business.
ಕ್ರೀಡೆಗಳಲ್ಲಿ ಸ್ಪರ್ಧಾತ್ಮಕ ಮನೋಭಾವದಿಂದ ಪಾಲ್ಗೊಳ್ಳಿ :ಮಂಗಾನವರ
Related Posts
Add A Comment

