ವಿಜಯಪುರ: ನಗರದ ದರ್ಬಾರ ಆಟದ ಮೈದಾನದಲ್ಲಿ ಬುಧವಾರದಂದು ನಡೆದ ಸಿದ್ದೇಶ್ವರ ‘ಬಿ’ ವಲಯ ಮಟ್ಟದ ಪ್ರೌಢ ಶಾಲಾ ಗುಂಪು ಆಟಗಳ ಕ್ರೀಡಾಕೂಟದಲ್ಲಿ ಬಂಜಾರಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ರಾಜಶೇಖರ ಚವ್ಹಾಣ್, ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ದೈಹಿಕ ಶಿಕ್ಷಕರಾದ ಎಸ್.ಎಲ್.ದೊಡಮನಿ, ತಂಡದ ಮ್ಯಾನೇಜರ್ ಆರ್.ವಿ.ಭುಜಂಗನವರ, ರೇಖಾ ರಜಪೂತ ಸೇರಿದಂತೆ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಬಂಜಾರಾ ಪ್ರೌಢ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
Related Posts
Add A Comment

