ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು ಕಲಬುರಗಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಮಹಿಳಾ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಆಗಷ್ಟ 27 ರಂದು ಮಂಗಳವಾರ ಕಲಬುರಗಿಯ ಟಿಪ್ಪು ಸುಲ್ತಾನ ಯುನಾನಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರಾದ ಪೃಥ್ವಿ ಸಿದರೆಡ್ಡಿ, ಶ್ರೇಯಾ ರೆಡ್ಡಿ, ಅರ್ಪಿತಾ ದೇಶಪಾಂಡೆ ದ್ವಿತಿಯ ಸ್ಥಾನ ಗಳಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ, ದೈಹಿಕ ನಿರ್ದೇಶಕ ಹಣಮಂತ ಪವಾರ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

