ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ್ ನರ್ಸಿಂಗ್ ಕಾಲೇಜಿನಲ್ಲಿ ಆಗಷ್ಟ 30 ಮತ್ತು ಆಗಷ್ಟ 31 ರಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ಕಲಬುರಗಿ ವಲಯ ಮಟ್ಟದ ಬಾಲಕರ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದೆ.
ಆಗಷ್ಟ 30 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಾರಂಭವಾಗಲಿರುವ ಪಂದ್ಯಾವಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಚಾಲನೆ ನೀಡಲಿದ್ದಾರೆ.
ಆಗಷ್ಟ್ 31 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಬಹುಮಾನ ವಿತರಿಸಲಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಶ್ವವಿಧ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾಲೇಜುಗಳ ಕಬಡ್ಡಿ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೋಳ್ಳಲಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
