ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಲಬುರಗಿ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಆಗಷ್ಟ 25 ರಂದು ರವಿವಾರ ಜಮಖಂಡಿಯ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ಕಲಬುರಗಿ ವಲಯ ಮಟ್ಟದ ಚೆಸ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಲಾವಣ್ಯ ತೊಗರಿ, ದೀಪ್ತಿ ಮಂಗಳಗಿ, ಗೀತಾಂಜಲಿ ಮೂದನೂರ, ಸಾನಿಕಾ ದೇಶಪಾಂಡೆ ದ್ವಿತಿಯ ಸ್ಥಾನ ಗಳಸಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಸಂಜಯ ಕಡ್ಲಿಮಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಎವಿಎಸ್ ಆಯುರ್ವೇದ ಕಾಲೇಜ್: ಚೆಸ್ ಪಂದ್ಯದಲ್ಲಿ ದ್ವಿತೀಯ ಸ್ಥಾನ
Related Posts
Add A Comment

