ವಿಜಯಪುರ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತದ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ್ ಘೋಷ ಅವರು ಆಗಸ್ಟ್ ೩೦ ಹಾಗೂ ೩೧ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆ.೩೦ರಂದು ವಿಜಯಪುರಕ್ಕೆ ಆಗಮಿಸಿ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳಿಗೆ ಭೇಟಿ ನೀಡುವರು. ಶಾಲೆ, ಕಾಲೇಜು ಹಾಗೂ ಐಟಿಐಗಳಿಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯಲ್ಲಿನ ಹಾಸ್ಟೇಲ್‌ಗಳು, ಆಸ್ಪತ್ರೆಗಳಿಗೆ, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಕಚೇರಿಗಳಿಗೆ ಭೇಟಿ ನೀಡಿ, ನಂತರ ಮುಂಗಾರು ಋತುವಿನ ವಿಪತ್ತು ನಿರ್ವಹಣಾ ಯೋಜನೆಯ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಆ.೩೧ರಂದು ಬೆಳಿಗ್ಗೆ ೧೦-೩೦ ರಿಂದ ೧-೩೦ರವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿಜಯಪುರದಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
