ವಿಜಯಪುರ: ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಡಾ.ಬಗಾದಿ ಗೌತಮ್ ಅವರು ಮಂಗಳವಾರ ಜಿಲ್ಲೆಯ ನಿಡಗುಂದಿ ಪಟ್ಟಣದ ಮತಗಟ್ಟೆ ಸಂಖ್ಯೆ 218ಹಾಗೂ ಆಲಮಟ್ಟಿ ಡ್ಯಾಂ ಸೈಟ್ ಮತಗಟ್ಟೆ-229ಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದುಕೊಂಡರು.
ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಭೇಟಿ ನೀಡಿ, ಮತದಾನ ಜಾಗೃತಿ ಕುರಿತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಹಾಗೂ ಮತಗಟ್ಟೆ ಅಧಿಕಾರಿಗಳೊಂದಿಗೆ (ಃಐಔ) ಚರ್ಚಿಸಿದರು. ಮತದಾನ ಕೇಂದ್ರದ ಮೂಲಭೂತ ಸೌಕರ್ಯಗಳು, ಮತದಾನ ಜಾಗೃತಿ ಅಭಿಯಾನದ ಮೂಲಕ ಗ್ರಾಮ ಪಂಚಾಯತಿ ಮಟ್ಟದಲ್ಲಿ ಈಗಾಗಲೇ ಹಮ್ಮಿಕೊಂಡ ಹಾಗೂ ಮುಂಬರುವ ದಿನಗಳಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಿಪಂ ಸಿಇಓ ರಾಹುಲ್ ಶಿಂಧೆ ಅವರು ಜಿಲ್ಲಾ ಸ್ವೀಪ್ ಸಮಿತಿ ಮೂಲಕ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮತದಾರರಿಗೆ ಮತದಾನದ ಮಹತ್ವ ಕುರಿತ ವಿಭಿನ್ನ ರೀತಿಯಿಂದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಯೋಜಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರ ನೀಡಿದರು.
ಈ ಸಂದರ್ಭದಲ್ಲಿ ನಿಡಗುಂದಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ವ್ಹಿ.ಎಸ್. ಹಿರೇಮಠ, ಬಸವನ ಬಾಗೇವಾಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಭಾರತಿ ಚೆಲುವಯ್ಯ, ಬಸವನ ಬಾಗೇವಾಡಿ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರಾ.ಉ) ಪ್ರಕಾಶ ದೇಸಾಯಿ, ನಿಡಗುಂದಿ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರಾ.ಉ) ಎಸ್.ಜೆ ಉದಯಕುಮಾರ, ತಹಶೀಲ್ದಾರ ಕಿರಣ್ ಕುಮಾರ ಕುಲಕರ್ಣಿ, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ರಮೇಶ ಮಾಡಬಾಳ, ಆಲಮಟ್ಟಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಚ್.ಆರ್. ವಡ್ಡರ, ಗೊಳಸಂಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಹಾವರಗಿ, ವಂದಾಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಿ. ಬಿ. ಕಲ್ಯಾಣಿ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಪ್ರಾದೇಶಿಕ ಆಯುಕ್ತ ಡಾ.ಬಗಾದಿ ಅವರಿಂದ
ಮತಗಟ್ಟೆಗಳ ಪರಿಶೀಲನೆ
Related Posts
Add A Comment