Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯತ್ವ ಮಾಡಿಸಿ :ಪಿ.ರಾಜೀವ
(ರಾಜ್ಯ ) ಜಿಲ್ಲೆ

ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯತ್ವ ಮಾಡಿಸಿ :ಪಿ.ರಾಜೀವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ ಸೆ.೨ ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ ೩೦೦ ರಂತೆ ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಪಕ್ಷದ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸದಸ್ಯತ್ವ ಅಭಿಯಾನ ಪ್ರಮುಖ ಘಟ್ಟ. ಕೇಂದ್ರ ಸಚಿವರಿಂದ ಹಿಡಿದು ಬೂತ ಮಟ್ಟದ ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನದಲ್ಲಿ ಅತ್ಯಂತ ಕ್ರೀಯಾಶೀಲವಾಗಿ ಪಾಲ್ಗೊಂಡು ತಮ್ಮ ತಮ್ಮ ಬೂತ ಮಟ್ಟದಲ್ಲಿ ೩೦೦ ಹೊಸ ಸದಸ್ಯರನ್ನಾಗಿ ಮಾಡುವಂತೆ ತಿಳಿಸಿದರು.
ಈ ಬಾರಿಯ ಸದಸ್ಯತ್ವ ಅಭಿಯಾನ ಸ್ವಲ್ಪ ವಿಭಿನ್ನವಾಗಿದ್ದು, ಕೇವಲ ಮಿಸ್ ಕಾಲ ನೀಡಿದರೆ ಸದಸ್ಯರಾಗಲ್ಲ. ಮೊಬೈಲ್ ಬರುವ ಒಟಿಪಿ ಬಳಸಿಕೊಂಡು ಐಡಿ ಕಾರ್ಡ ಆದ ನಂತರವೇ ಸದಸ್ಯತ್ವ ಅಭಿಯಾನ ಪೂರ್ತಿಯಾದಂತೆ ಅದನ್ನು ಕಾರ್ಯಕರ್ತರು ಗಮನಿಸಬೇಕು ಎಂದರು.
ಅಲ್ಲದೇ ಸದಸ್ಯತ್ವ ಅಭಿಯಾನದಲ್ಲಿ ಪ್ರತಿ ಮತಕ್ಷೇತ್ರ-ಮಂಡಲದಲ್ಲಿರುವ ಬರುವ ಮಾಜಿ ಸಚಿವರು ಹಾಲಿ ಹಾಗೂ ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್, ಜಿ.ಪಂ.ಹಾಗೂ ತಾ.ಪಂ.ಮಾಜಿ ಸದಸ್ಯರು ಮಾಜಿ ಮಹಾನಗರ ಪಾಲಿಕೆಗಳ ಸದಸ್ಯರು ಕೂಡ ಪ್ರತಿ ಮನೆಗಳಿಗೆ ಹೋಗಿ ಜನರಿಗೆ ಅರಿವು ಮೂಡಿಸಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಸೂಚನೆ ಬರದಿದ್ದರೂ ಸ್ವಯಂಪ್ರೇರಿತವಾಗಿ ಸದಸ್ಯತ್ವ ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಈ ಮೂಲಕ ವಿಜಯಪುರ ಜಿಲ್ಲೆಯಲ್ಲಿ ೩.೫೦ ಲಕ್ಷ ಹೊಸ ಸದಸ್ಯರ ಐಡಿ ರಚಿಸಬೇಕು. ಸೆ.೨ ರಿಂದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು ಸೆ.೩೦ ರೊಳಗಾಗಿ ಅಭಿಯಾನ ಮುಗಿಸಬೇಕೆಂದರು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನದಿಂದ ಪಕ್ಷದ ಸಂಘಟನೆಗೆ ಹೆಚ್ಚಿನ ಬಲ ಬರಲಿದೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಜವಾಬ್ದಾರಿ ವಹಿಸಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಸಂಪೂರ್ಣವಾಗಿ ಮುಂದಿನ ೧ ತಿಂಗಳುಗಳ ಕಾಲ ಸದಸ್ಯತ್ವ ಅಭಿಯಾನಕ್ಕೆ ಕಾರ್ಯಕರ್ತರು ದುಡಿಯಬೇಕು. ಆ ಮೂಲಕ ಜಿಲ್ಲಾದ್ಯಂತ ಯಶಸ್ವಿಯಾಗಿ ಸದಸ್ಯತ್ವ ಅಭಿಯಾನ ಮಾಡುವಂತೆ ಕೋರಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ, ಮುಖಂಡರಾದ ವಿಜುಗೌಡ ಪಾಟೀಲ,ಬಸವರಾಜ ಯಂಕಂಚಿ, ಚಂದ್ರಶೇಖರ ಕವಟಗಿ, ಕಾಸು ಗೌಡ ಬಿರಾದಾರ, ಸಂಜೀವ ಐಹೊಳೆ, ಸ್ವಪ್ನಾ ಕಣಮುಚನಾಳ, ಈರಣ್ಣಾ ರಾವರೂ, ಸಾಬು ಮಾಶ್ಯಾಳ, ಮುಳುಗೌಡ ಪಾಟೀಲ, ರಾಜ್ಯ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಪ್ರಕೋಷ್ಠ ಪದಾಧಿಕಾ ರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.