Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರಿಗಳ ಕರ್ತವ್ಯ ಲೋಪ: ವಸತಿ ಯೋಜನೆ ಫಲಾನುಭವಿಗಳ ಅನುದಾನಕ್ಕೆ ತಡೆ
(ರಾಜ್ಯ ) ಜಿಲ್ಲೆ

ಅಧಿಕಾರಿಗಳ ಕರ್ತವ್ಯ ಲೋಪ: ವಸತಿ ಯೋಜನೆ ಫಲಾನುಭವಿಗಳ ಅನುದಾನಕ್ಕೆ ತಡೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ವಿಧಾನ ಸಭಾ ಕ್ಷೇತ್ರದ ಪುರಸಭೆಗೆ ಸನ್೨೦೨೧-೨೨ನೆಯ ಸಾಲಿನ ವಾಜಪೇಯಿ ನಗರದ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ವಸತಿ ನಗರ ಯೋಜನೆಯ ಅಡಿಯಲ್ಲಿನ ೭೫೦ ಮನೆಗಳ ಫಲಾನುಭವಿಗಳ ಅನುದಾನವನ್ನು ತೆಡೆಹಿಡಿಯಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಹೆಚ್ಚುವರಿ ಗುರಿಗೆ ಫಲಾನುಭವಿಗಳನ್ನು ಆಶ್ರಯ ಸಮಿತಿಯ ಆ.೦೭, ೨೦೨೩ರಂದು ಠರಾವು ಸಂಖ್ಯೆ ೦೧ರಲ್ಲಿ ಸಾಮಾನ್ಯ ಹಾಗೂ ಅಲ್ಪ ಸಂಖ್ಯಾತರು ಸೇರಿ ೫೬೯ ಹಾಗೂ ಪ.ಜಾತಿ ಮತ್ತು ಪ.ಪಂಗಡ ೧೮೧ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ. ಆದರೆ ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿ ಬದಲಾಗಿ ಇತರ ಸಾಮಾನ್ಯ ವರ್ಗದ ಫಲಾನುಭವಿಗಳನ್ನು ಆಯ್ಕೆ ಮಾಡಿರುತ್ತಾರೆ ಎಂದು ನೀಡಿರುವ ದೂರಿನನ್ವಯ ನಗರ ಮಟ್ಟದ ತಾಂತ್ರಿಕ ಕೋಶದ ಸಿಬ್ಬಂದಿ ತಂಡ ರಚಿಸಿ ತನಿಖೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಈ ತನಿಖಾ ತಂಡವು ಪರಿಶೀಲನೆ ಮಾಡಿ ವರದಿ ಸಲ್ಲಿಸಿದ್ದು, ಸದರಿ ವರದಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳನ್ನು ಆಶ್ರಯ ಸಮಿತಿಯಲ್ಲಿ ಆಯ್ಕೆ ಮಾಡಿದ್ದು, ಆದರೆ ವಸತಿ ವಿಷಯ ನಿರ್ವಾಹಕ ಖ್ಯಾತಪ್ಪ ಕುಂಬಾರ ಆಯ್ಕೆ ಮಾಡಲಾದ ಫಲಾನುಭವಿಗಳನ್ನು ಕೈಬಿಟ್ಟು, ಇತರೆ ವರ್ಗದ ಹೆಸರನ್ನು ನಿಯಮಬಾಹಿರವಾಗಿ ನೇರವಾಗಿ ೪ಬಿಯಲ್ಲಿ ಸೇರ್ಪಡೆ ಮಾಡಿ ದಾಖಲೀಕರಣ ಮಾಡಿರುತ್ತಾರೆ. ಅಲ್ಲದೇ ಇದೇ ರೀತಿಯಾಗಿ ಇನ್ನೂ ೦೯ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಿರುತ್ತಾರೆ ಎಂದು ತನಿಖಾ ವರದಿಯಲ್ಲಿ ತಿಳಿಸಿರುತ್ತಾರೆ. ಇದರಿಂದಾಗಿ ವಿಷಯ ನಿರ್ವಾಹಕ ಹಾಗೂ ಹಿಂದಿನ ಮುಖ್ಯಾಧಿಕಾರಿ ಕರ್ತವ್ಯ ಲೋಪ ಎಸಗಿದ್ದಾರೆ.
ಅಲ್ಲದೇ ೭೫೦ ಆಯ್ಕೆ ಮಾಡಲಾದ ಫಲಾನುಭವಿಗಳ ಪೈಕಿ ೧೫೫ ಅರ್ಜಿಗಳು ಮತ್ತು ದಾಖಲೆಗಳು ಪರಿಶೀಲನೆಗಾಗಿ ಹಾಜರಪಡಿಸಿದ್ದು, ಇನ್ನೂಳಿದ ೫೯೫ ಅರ್ಜಿಗಳನ್ನು ಪರಿಶೀಲನೆಗೆ ತನಿಖಾ ಕಾಲಕ್ಕೆ ಹಾಜರಪಡಿಸಿರುವುದಿಲ್ಲ. ಹೀಗಾಗಿ ಆಯ್ಕೆ ಮಾಡಲಾದ ಪೈಕಿ ಇನ್ನೂ ೫೯೫ ಫಲಾನುಭವಿಗಳ ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸ್ಪಷ್ಟವಾಗಿ ಕಂಡು ಬರುವುದಾಗಿ ತಿಳಿಸಿ ಈಗಾಗಲೇ ಆಯ್ಕೆ ಮಾಡಿ ಜಿಪಿಎಸ್ ಹಂತದಲ್ಲಿರುವ ಎಲ್ಲ ಮನೆಗಳ ಅನುದಾನವನ್ನು ತಡೆಹಿಡಿಯುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದರಿ ತನಿಖಾ ತಂಡದ ವರದಿಯನ್ನು ಪರಿಶೀಲಿಸಲಾಗಿ, ಸಿಂದಗಿ ಪುರಸಭೆಗೆ ೭೫೦ ಹೆಚ್ಚುವರಿ ಮನೆಗಳ ಜಿಪಿಎಸ್ ಹಾಗೂ ದಾಖಲೀಕರಣ ಸಮಯದಲ್ಲಿ ಲೋಪದೋಷಗಳು ಎಸಗಿರುವ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ತನಿಖೆ ನಡೆಸಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಅಂತಿಮ ವರದಿ ನೀಡುವವರೆಗೆ ಸಿಂದಗಿ ಪುರಸಭೆಯ ೭೫೦ ಹೆಚ್ಚುವರಿ ಮನೆಗಳ ಅನುದಾನವನ್ನು ತಡೆಹಿಡಿಯುವಂತೆ ಜಿಲ್ಲಾಧಿಕಾರಿ ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ್ ವ್ಯವಸ್ಥಾಪಕ ನಿರ್ದೇಶಕರಿಗೆ ಕೋರಿ ಪತ್ರ ಬರೆದಿದ್ದಾರೆ.

“ಈಗಾಗಲೇ ಅರ್ಜಿಗಳನ್ನು ಪರಿಶೀಲನೆ ಮಾಡಲಾಗಿದೆ. ತಪಿತಸ್ಥರಿಗೆ ಅತೀ ಶೀಘ್ರದಲ್ಲೇ ನೋಟೀಸ್ ನೀಡಲಾಗುವುದು.”

– ಬಿ.ಎ.ಸೌದಾಗರ್
ಕಾರ್ಯನಿರ್ವಾಹಕ ಅಧಿಕಾರಿ, ವಿಜಯಪುರ ನಗರಾಭಿವೃದ್ಧಿ ಕೋಶ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.