Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓದಿನೊಂದಿಗೆ ಪಠ್ಯೇತರ ಚಟುವಟಿಕೆಗೂ ಪ್ರಾಮುಖ್ಯತೆ ನೀಡಿ
(ರಾಜ್ಯ ) ಜಿಲ್ಲೆ

ಓದಿನೊಂದಿಗೆ ಪಠ್ಯೇತರ ಚಟುವಟಿಕೆಗೂ ಪ್ರಾಮುಖ್ಯತೆ ನೀಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದ ಡಿಸಿ ಟಿ.ಭೂಬಾಲನ್ ಸಲಹೆ

ವಿಜಯಪುರ: ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭದ್ರ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳುವ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.
ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ ೨೯ರ ಗುರುವಾರದಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ತಿಕೋಟ ತಾಲೂಕಿನ ಅರಕೇರಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೆರಳು ನಮ್ಮನ್ನು ಹಿಂಬಾಲಿಸಿದಂತೆ ನಮ್ಮ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ. ಮೇಜರ್ ದ್ಯಾನ ಚಂದ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರು ಹಾಕಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಹಾಕಿ ಮಾಂತ್ರಿಕರಾಗಿದ್ದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸಾಧನೆ ಅವಲೋಕಿಸಿ, ಅವರ ಸತತ ಶ್ರಮ ಕಠಿಣ ಅಭ್ಯಾಸಗಳಿಂದ ಮಾಡಿರುವ ಅವರ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೆರೆಣೆಯಾಗಿ ಪಡೆದು, ಸಾಧನೆ ಪಥದಲ್ಲಿ ಸಾಗಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಅವರು ಆಶಿಸಿದರು.
ಈ ವಸತಿ ಶಾಲೆ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿದ್ದು, ಅವರ ಜೀವನ ಚರಿತ್ರೆ ಅಧ್ಯಯನ ಮಾಡುವ ಮೂಲಕ ಅವರ ಸಾಧನೆಗಳನ್ನು ತಿಳಿದುಕೊಳ್ಳಬೇಕು. ಸಾಧಕರು ನಮಗೆ ಯಾವಾಗಲೂ ಪ್ರೇರಣಾದಾಯಕರಾಗಿರುತ್ತಾರೆ. ತಮ್ಮ ಶಾಲಾ ಜೀವನದ ಸಂದರ್ಭ ನೆನಪಿಸಿಕೊಂಡ ಜಿಲ್ಲಾಧಿಕಾರಿಗಳು ಇಂತಹ ಮಹಾನ್ ವ್ಯಕ್ತಿಗಳನ್ನು ಎರಡು ಬಾರಿ ಭೇಟಿಯಾಗಲು ದೊರೆತ ಅವಕಾಶಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈಯ್ಯಲು ಹಲವು ಅವಕಾಶ ಒದಗಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಜಯಪುರ ಐ.ಆರ್.ಬಿ ಕಮಾಂಡೆಂಟ್ ನಂದಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಅರಕೇರಿಯ ಡಾ:ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲರಾದ ಶ್ರೀಮತಿ ರೇಖಾ ಬಾರ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.