ವಿಜಯಪುರ: ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಯುವಜನತೆಯನ್ನು ಸದೃಢಗೊಳಿಸುವುದು ಅತ್ಯವಶ್ಯಕವಾಗಿದ್ದು, ಯುವಕರು ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ಸಧೃಢತೆಯೊಂದಿಗೆ ಉತ್ತಮ ಸಾಧನೆಗೈಯ್ಯಲು ಮುಂದಾಗಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಷ್ಕೃತ ಡಾ.ಜಾವಿದ ಜಮಾದಾರ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿವಿಧ ಕ್ರೀಡಾ ಸಂಸ್ಥೆಗಳು ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿಂದು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲಾ ವ್ಹಾಲಿಬಾಲ್ ಸಂಸ್ಥೆ ಅಧ್ಯಕ್ಷ ಭೀಮಸೇನ ಕೊಕರೆ ಅವರು ಮಾತನಾಡಿ, ಕ್ರೀಡೆಗಳು ಮನಸ್ಸು, ಶರೀರ, ಗಟ್ಟಿಯಾಗಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಬಹುಮಖ್ಯ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಇದಕ್ಕೂ ಮೊದಲು ಬೆಳಿಗ್ಗೆ ನಗರದ ಜಿಲ್ಲಾ ಕ್ರೀಡಾಂಗಣದಿಂದ ಗಾಂಧಿಚೌಕ್‌ವರೆಗೆ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿ ಜಾಥಾ ಜರುಗಿತು.
ಕಾರ್ಯಕ್ರಮದಲ್ಲಿ ರಾಜ್ಯ ಸೈಕ್ಲಿಂಗ್ ಅಸೋಸಿಯೇಶನ್ ಅಧ್ಯಕ್ಷ ರಾಜು ಬಿರಾದಾರ, ಕ್ರೀಡಾ ಇಲಾಖೆ ಅಧೀಕ್ಷಕ ಎಸ್.ಬಿ.ಕಡಕಲ್, ಜಿಲ್ಲಾ ಹಾಕಿ ಅಸೋಸಿಯೇಶನ್ ಅಧ್ಯಕ್ಷ ಎಸ್.ಕೆ.ಇನಾಮದಾರ, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಎಸ್.ಹಿರೇಮಠ, ಜಿಲ್ಲಾ ಬಾಸ್ಕೆಟ್‌ಬಾಲ್ ಅಸೊಸಿಯೇಶನ್ ಅಧ್ಯಕ್ಷ ರಾಜೀವ ಬಿದರಿ, ಉಪಾಧ್ಯಕ್ಷ ಸಂಜಯ ಹಿರೇಮಠ, ಜಿಲ್ಲಾ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಎನ್.ಎಂ.ಊಟಗಿ, ನೆಹರು ಯುವ ಕೇಂದ್ರದ ಅಧಿಕಾರಿ ರಾಹುಲ ಡೋಂಗ್ರೆ, ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿ ಪ್ರಕಾಶ ರಾಠೋಡ, ಜಿಲ್ಲಾ ತರಬೇತಿದಾರ ಎಂ.ಬಿ.ಪಾಟೀಲ, ಯಲ್ಲಪ್ಪ ಜಂಪ್ಲೆ, ಶಂಕರ ಸನಪ, ರಾಜು ಬೆಳ್ಳುಬ್ಬಿ, ಸದಾಶಿವ ಅಮರಪ್ಪಗೋಳ, ಸಲಾವುದ್ದಿನ ಮಳಗಿ, ಅಲ್ಕಾ ಫಡತರೆ ಸೇರಿದಂತೆ ಇತರರು ಉಪಸ್ಥಿತರಿದ್ದರು. ಎಂ.ವಾಯ್.ಚಿಂಚಲಿ ಸ್ವಾಗತಿಸಿದರು. ಗೋಪಾಲ ಲಮಾಣಿ ವಂದಿಸಿದರು.
Subscribe to Updates
Get the latest creative news from FooBar about art, design and business.
ಬಲಿಷ್ಠ ಭಾರತ ನಿರ್ಮಾಣಕ್ಕೆ ದೈಹಿಕ ಸದೃಢತೆ ಅಗತ್ಯ :ಡಾ.ಜಮಾದಾರ
Related Posts
Add A Comment

