ವಿಜಯಪುರ: ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್), ಧಾರವಾಡ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಸ್ವ ಉದ್ಯೋಗ ಕೈಗೊಳ್ಳಲಿಚ್ಚಿಸುವ ನಿರುದ್ಯೋಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ೧೦ ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವವರು ದಿನಾಂಕ : ೦೫-೦೯-೨೦೨೪ ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಶಿಕಾರಖಾನಾ, ಸ್ಟೇಶನ್ ಬ್ಯಾಕ್ ರಸ್ತೆ, ವಿಜಯಪುರ ಮೊ: ೮೮೮೪೧೮೪೪೩೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
