೧೧ ಜನ ಪತ್ರಕರ್ತರಿಗೆ ಕೆಯುಡಬ್ಲೂಜೆ ತಾಲೂಕು ಪ್ರಶಸ್ತಿ
ಮುದ್ದೇಬಿಹಾಳ: ಪಟ್ಟಣದ ಎಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ನ ಸಭಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ೭೮ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಡೆದ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರಧಾನ, ಸೌಲಭ್ಯ ವಿತರಣೆ, ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ತಾಲೂಕಿನ ’ಉದಯರಶ್ಮಿ’ ವರದಿಗಾರ ಚೇತನ ಶಿವಶಿಂಪಿ ಸೇರಿದಂತೆ ೧೧ ಜನ ಪತ್ರಕರ್ತರಿಗೆ ಕೆಯುಡಬ್ಲೂಜೆ ತಾಲೂಕು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು, ಕಾನಿಪ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಯುವ ಉದ್ಯಮಿ ಭರತ ಪಾಟೀಲ ನಡಹಳ್ಳಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ದಿ ಕರ್ನಾಟಕ ಕೋಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ, ಸಮಾಜ ಸೇವಕ ಸಿ.ಬಿ.ಅಸ್ಕಿ, ವೀರಶೈವ ಮಹಾ ಸಭಾ ತಾಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ, ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಸೇರಿದಂತೆ ಮತ್ತೀತರರು ಇದ್ದರು.

