ಇಂಡಿ: ಕೇಂದ್ರ ಸಾಹಿತ್ಯ ಅಕಾದೆಮಿಯ ನವದೆಹಲಿ ಹಾಗೂ ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಕಾಲೇಜಿನ ಸಹಯೋಗದಲ್ಲಿ ಇದೇ ೩೧ರಂದು ಶನಿವಾರ ಮಧ್ಯಾಹ್ನ ೧೨.೩೦ಕ್ಕೆ ‘ರಾಘವೇಂದ್ರ ಖಾಸನೀಸ ಕಥನ ಮಾರ್ಗ’ ಕುರಿತಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಆರ್. ಎಚ್. ರಮೇಶ ವಹಿಸಿಕೊಳ್ಳಿದ್ದು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಿರಿಯ ಕಾದಂಬರಿಕಾರ ಡಾ.ಬಾಳಾಸಾಹೇಬ ಲೋಕಾಪುರ ಹಾಗೂ ವಿಜಯಪುರದ ಹಿರಿಯ ವಿಮರ್ಶಕ ಮನು ಪತ್ತಾರ ಅವರು ರಾಘವೇಂದ್ರ ಖಾಸನೀಸರ ಕತೆಗಳ ಕುರಿತು ಮಾತನಾಡಲಿದ್ದಾರೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ವಿಜಯಪುರದ ಓದುಗರ ಚಾವಡಿಯ ಅಧ್ಯಕ್ಷ ಶರಣು ಸಬರದ, ತಾಲ್ಲೂಕು ಕನ್ನಡ ಸಾಹಿತ್ಯ ಪರಿತ್ತಿನ ಗೌರವ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು,
ವಿಜಯಪುರ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯರಾಗಿ ರಾಜ್ಯ ಸರ್ಕಾರದಿಂದ ನೇಮಕಗೊಂಡ ಪಟ್ಟಣದ ಡಾ.ಶಿವಯೋಗೆಪ್ಪ ಮಾಡ್ಯಾಳರನ್ನು ಇದೇ ಸಂದರ್ಭದಲ್ಲಿ ಗೌರವ ಸನ್ಮಾನ ಮಾಡಲಾಗುವುದು.
ಸಾರ್ವಜನಿಕರು, ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಮೇಶ ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

