ಮುದ್ದೇಬಿಹಾಳ : ಪಟ್ಟಣದ ಪುರಸಭೆಯ ೧೦ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ದಿನಾಂಕವನ್ನು ಪ್ರಕಟಿಸುವಂತೆ ಒತ್ತಾಯಿಸಿ ಇಲ್ಲಿನ ಪುರಸಭೆಯ ಬಿಜೆಪಿ ಸದಸ್ಯರು ಗುರುವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಪುರಸಭೆಯ ೧೦ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಸಲು ರಾಜ್ಯ ಸರಕಾರ ಮೀಸಲಾತಿ ನಿಗದಿ ಪಡಿಸಿ ಆದೇಶ ಮಾಡಿ ೨೪ ದಿನ ಹಾಗೂ ಜಿಲ್ಲಾಧಿಕಾರಿಗಳೂ ಆದೇಶ ಮಾಡಿ ೨೦ ದಿನ ಕಳೆದಿದ್ದರೂ ಸಹ ಚುನಾವಣೆ ನಡೆಸಲು ದಿನಾಂಕವನ್ನು ಪ್ರಕಟಗೊಳಿಸಿರುವದಿಲ್ಲ. ಕಾರಣ ಕೂಡಲೇ ರಾಜ್ಯ ಸರಕಾರದ ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಚುನಾವಣೆ ನಡೆಸಲು ದಿನಾಂಕವನ್ನು ನಿಗದಿಪಡಿಸಿ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಮೂಲಕ ರಾಜ್ಯ ಸರ್ಕಾರದ ಆದೇಶವನ್ನು ಪಾಲನೆ ಮಾಡಬೇಕು. ೨ದಿನಗಳಲ್ಲಿ ಚುನಾವಣಾ ದಿನಾಂಕ ಆದೇಶ ಮಾಡದೇ ಇದ್ದಲ್ಲಿ ವಿಳಂಬ ನೀತಿ ಖಂಡಿಸಿ ತಹಶೀಲ್ದಾರ ಕಚೇರಿಯ ಎದುರು ಸತ್ಯಾಗ್ರಹ ಹಮ್ಮಿಕೊಳ್ಳುವದಾಗಿ ಪತ್ರದಲ್ಲಿ ನಮೂದಿಸಲಾಗಿದೆ.
ಮನವಿ ಪತ್ರಕ್ಕೆ ಸದಸ್ಯರುಗಳಾದ ಸದಾಶಿವ ಮಾಗಿ, ಸಂಗಮ್ಮ ದೇವರಳ್ಳಿ, ಅಶೋಕ ವನಹಳ್ಳಿ, ಶಾಂತಾಬಾಯಿ ಪೂಜಾರಿ, ಬಸವರಾಜ ಮುರಾಳ, ಸಹನಾ ಬಡಿಗೇರ, ಬಸಪ್ಪ ತಟ್ಟಿ ಸಹಿ ಹಾಕಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

