ತಾಳಿಕೋಟಿ: ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ವಿಕಸನ ವಾಗುವುದರೊಂದಿಗೆ ಉತ್ತಮ ವ್ಯಕ್ತಿತ್ವದ ನಿರ್ಮಾಣವು ಆಗುತ್ತದೆ ಒಂದು ಸದೃಢ ಸಮಾಜದ ನಿರ್ಮಾಣದಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದು ಕೊಡಗಾನೂರ ಸಿಆರ್ ಪಿ ಸಂಗಮೇಶ ಪಾಲ್ಕಿ ಹೇಳಿದರು. ತಾಲೂಕಿನ ಗೊಟಖಂಡಕಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕೊಡಗಾನೂರ ಕ್ಲಸ್ಟರ್ ಮಟ್ಟದ 2024-25 ನೇ ಸಾಲಿನ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಪಾಠ ಎಷ್ಟು ಮುಖ್ಯ ವೋ ಆಟವು ಅಷ್ಟೇ ಮುಖ್ಯವಾಗಿದೆ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದರು. ಗಡಿ ಸೋಮನಾಳ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಟಿ.ಎಸ್.ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾಕೂಟದಲ್ಲಿ 15 ಹಿರಿಯ ಪ್ರಾಥಮಿಕ ಶಾಲೆಗಳ ಸುಮಾರು 250ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ವಿಶೇಷ ಕ್ರೀಡಾಪಟುಗಳಿಗೆ ಪ್ರಥಮ ದ್ವಿತೀಯ ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಕ್ರೀಡಾಕೂಟದಲ್ಲಿ ಆರ್.ಎಸ್. ಹಿಪ್ಪರಗಿ. ಶ್ರೀಮತಿ ಅಂಬಿಕಾ.ಡಿ.ಸಿ.ಕಲಾಲ. ಬಿ.ಸಿ.ಗೋಗಿ ಹಾಗೂ ತಾಳಿಕೋಟಿ ವಲಯದ ದೈಹಿಕ ಶಿಕ್ಷಕರು ಕ್ರೀಡಾಕೂಟವನ್ನು ನಡೆಸಿಕೊಟ್ಟರು.
Subscribe to Updates
Get the latest creative news from FooBar about art, design and business.
Related Posts
Add A Comment

