Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಿಕೆಗಳು ಸಮಾಜದ ಕನ್ನಡಿಯಂತೆ ಇರಬೇಕು :ಶಾಸಕ ನಾಡಗೌಡ
(ರಾಜ್ಯ ) ಜಿಲ್ಲೆ

ಪತ್ರಿಕೆಗಳು ಸಮಾಜದ ಕನ್ನಡಿಯಂತೆ ಇರಬೇಕು :ಶಾಸಕ ನಾಡಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪತ್ರಿಕಾ ಮಾಧ್ಯಮಕ್ಕೆ ಇರುವ ಗೌರವ ಕಳಚಿ ಬಿದ್ದಿದೆ. ಇಂದಿನ ಮಾಧ್ಯಮಗಳು ಯಾವುದಕ್ಕೆ ಎಷ್ಟು ಮಹತ್ವ ಕೊಡಬೇಕು ಅದಕ್ಕೆ ಮಹತ್ವ ಕೊಡುತ್ತಿಲ್ಲ ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಎಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ನ ಸಭಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಶ್ರೀ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್, ಅಸ್ಕಿ ಫೌಂಡೇಶನ್, ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಮಹಾಸಭೆ, ಮನೆಯಲ್ಲಿ ಮಹಾಮನೆ ಬಳಗ, ವಿಕಲಚೇತನರ ಒಕ್ಕೂಟ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವತಿಯಿಂದ ೭೮ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಡೆದ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರಧಾನ, ಸೌಲಭ್ಯ ವಿತರಣೆ, ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ಟಿವಿ ಮಾಧ್ಯಮಗಳು ಬರೀ ಜೈಲಿನ ಬಗ್ಗೆಯೇ ತೋರಿಸುತ್ತಿವೆ. ಯಾವುದನ್ನು ತೋರಿಸಬೇಕು ಯಾವುದನ್ನ ತೋರಿಸಬಾರದು ಎಂಬ ಬಗ್ಗೆ ಪರಿಶೀಲಿಸುತ್ತಿಲ್ಲ. ಇದರಿಂದ ತಪ್ಪು ಮಾಡಿ ಜೈಲಿಗೆ ಹೋದರೆ ರಾಜಾರೋಷವಾಗಿ ಇರಬಹುದು ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುತ್ತಿವೆ. ಇದರಿಂದ ಸಮಾಜದ ಸ್ವಾಸ್ಥö್ಯ ಹಾಳಾಗುತ್ತಿದೆ. ಪತ್ರಿಕೆಗಳು ಕನ್ನಡಿ ಇದ್ದ ಹಾಗೆ ಇರಬೇಕು. ಯಾವತ್ತೂ ನೈಜತೆಯನ್ನು ತೋರಿಸಬೇಕು ಅಂದಾಗ ಮಾತ್ರ ಸಮಾಜ ಸುಧಾರಣೆಯಾಗಲು ಸಾಧ್ಯ ಎಂದರು.
ದಿವ್ಯ ಸಾನಿಧ್ಯ ವಹಿಸಿದ್ದ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ ಸಂಸ್ಥಾಪಕರೂ ಆಗಿರುವ ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ದೇವರು ಮಾತನಾಡಿ, ಪತ್ರಕರ್ತರು ನಿರಂತರ ಅಧ್ಯಯನ ಶೀಲರಾಗಿರಬೇಕು. ಪತ್ರಕರ್ತರು ಮಠ ಮತ್ತು ಶಿಕ್ಷಣ ಸಂಸ್ಥೆಗಳ ತರಹ ತಪ್ಪುಮಾಡಿದವರಿಗೊಂದು ಅವಕಾಶ ನೀಡಿ ತಿದ್ದಿ ಸುಂದರವಾದ ಮೂರ್ತಿಯನ್ನಾಗಿ ಮಾಡಲು ಮುಂದಾಗಬೇಕು ಎಂದರು.
ಸಮಾಜ ಸೇವಕ ಸಿ.ಬಿ.ಅಸ್ಕಿ, ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ ಮಾತನಾಡಿದರು. ಕಾನಿಪ ಸಂಘದ ೧೧ ಸದಸ್ಯರಿಗೆ ಕೆಯುಡಬ್ಲೂಜೆ ತಾಲೂಕು ಪ್ರಶಸ್ತಿ ನೀಡಿ ಗೌರವಿಸಿದರೆ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ವಾಣಿಜ್ಯ ರತ್ನ ಪ್ರಶಸ್ತಿ ಪುರಸ್ಕೃತ ಶರಣು ಸಜ್ಜನ, ವೀರಶೈವ ಮಹಾ ಸಭಾ ತಾಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪತ್ರಿಕಾ ವಿತಕರಕರಿಗೆ ಎರಡು ಜೊತೆ ಬಟ್ಟೆ, ಕಾನಿಪದಿಂದ ೭೮ನೇ ಸ್ವಾತಂತ್ರೋತ್ಸವದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಭಾಷಣ ಸ್ಪರ್ದೆಯ ವಿಜೇತರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.
ಕಾನಿಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ಡವಡವಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಅಧ್ಯಕ್ಷ ಮುತ್ತಣ್ಣ ವಡವಡಗಿ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರಣ್ಣ ತಾರನಾಳ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ದಿ ಕರ್ನಾಟಕ ಕೋಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ, ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ, ಬಾಪುಗೌಡ ಪಾಟೀಲ ಸೇರಿದಂತೆ ಮತ್ತೀತರರು ವೇದಿಕೆಯ ಮೇಲಿದ್ದರು.
ಸಂಗಮೆಶ ಶಿವಣಗಿ ತಂಡದವರು ಸಂಗೀತ ಸೇವೆ ನೀಡಿದರು. ಕಾನಿಪ ಸಂಘದ ಹಿರಿಯ ಸದಸ್ಯ ಎಚ್.ಆರ್.ಬಾಗವಾನ ಸ್ವಾಗತಿಸಿದರು. ಶಿಕ್ಷಕ, ಹಾಸ್ಯ ಕಲಾವಿದ ಗೋಪಾಲ ಹೂಗಾರ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.