ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ ರ ನಿಯಮ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ದಿನಾಂಕ : ೦೬-೦೯-೨೦೨೪ ರೊಳಗೆ ಅವಶ್ಯಕ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment