ವಿಜಯಪುರ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಿನ್ನಲೆಯಲ್ಲಿ ಮೇ.10ರಂದು ಮತದಾನ ಜರುಗಲಿದ್ದು, ಮತದಾನ ಮುಕ್ತಾಯವಾಗುವ 48ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಸುಗಮ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ದೃಷ್ಟಿಯಿಂದ ದಂಡ ಸಂಹಿತೆ 1973 ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.
ಪ್ರತಿಬಂಧಕಾಜ್ಞೆ ಆದೇಶದಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆ ಜನರು ಸೇರುವಂತಿಲ್ಲ ಎಂದು ಆದೇಶಿಸಲಾಗಿದೆ.
ಕಲ್ಲುಗಳನ್ನು ಮತ್ತು ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ್ ವಸ್ತುಗಳು, ಯಾವುದೇ ದಾಹಕ ವಸ್ತುಗಳು, ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡುವ ಮಾರಕಾಸ್ತçಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಡೆಸುವುದನ್ನು ನಿಷೇಧಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಯ ಝರಾಕ್ಸ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆ ತೆರೆಯುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಸ್ಥಳಗಳಲ್ಲಿ ಬಹಿರಂಗವಾಗಿ ಘೋಷಣೆ, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ, ವ್ಯಕ್ತಿಗಳ ತೇಜೋವಧೆ ಮಾಡುವ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಕಾನೂನು ಮತ್ತು ಸುವ್ಯವಸ್ಥೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತçಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಮಡು ಬಂದಲ್ಲಿ ವಶಪಡಿಸಿಕೊಳ್ಳುವ ಅಧಿಕಾರಿ ಪೋಲಿಸ್ ಅಧಿಕಾರಿಗಳು ಹೊಂದಿದ್ದು, ಅಂತಹ ಮಾರಕಾಸ್ತçಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಂಡು, ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು.
ಮತಗಟ್ಟೆಗಳ 100 ಮೀ. ವ್ಯಾಪ್ತಿಯಲ್ಲಿ (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದ ಅಧಿಕಾರಿ-ಸಿಬ್ಬಂದಿಗಳು ಹೊರತುಪಡಿಸಿ) ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟಾçನಿಕ್ ಉಪಕರಣ ನಿಷೇಧಿಸಲಾಗಿದೆ. ಪ್ರಚಾರಕ್ಕೆ ಸಮಬಂಧಿಸಿದ ಪೋಸ್ಟ್ರ್ ಬ್ಯಾನರ್ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ., ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಅವಧಿಯಲ್ಲಿ ಮತದಾರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಮತ್ತು ಅತಿಥಿಗೃಹಗಳಲ್ಲಿ ವಾಸ್ತವ್ಯ ಹೂಡಿರುವವರ ಪರಿಶೀಲನೆ ನಡೆಸಿ, ಮತದಾರರಲ್ಲದವರನ್ನು ಹೊರಗೆ ಕಳುಹಿಸಲು ಕ್ರಮ ವಹಿಸಲಾಗುವುದು.
ಈ ಆದೇಶ ಉಲ್ಲಂಘಿಸಿದವರ ವಿರುದ್ದ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೋಲಿಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಮತ್ತು ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಚುನಾವಣೆ: ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ
Related Posts
Add A Comment