ಚಡಚಣ: ಸಮೀಪದ ನಿವರಗಿ ಗ್ರಾಮದ ಶ್ರೀ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಚಡಚಣ ವಲಯ ಮಟ್ಟದ ಪ್ರೌಢ ಶಾಲಾ ಹಂತದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಚಡಚಣ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲಾ ಆವರಣದಲ್ಲಿ ಬುಧವಾರದಂದು ಹಮ್ಮಿಕೊಂಡಿದ್ದ ಪ್ರೌಢ ಶಾಲಾ ಹಂತದ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಕಬಡ್ಡಿಯಲ್ಲಿ ಪ್ರಥಮ, ಸಾಕ್ಷಿ ತೇಲಿ ಎತ್ತರ ಜಿಗಿತದಲ್ಲಿ ಪ್ರಥಮ, ಶೃತಿ ಚಿಕ್ಕಲಕಿ ದ್ವಿತೀಯ, ಮಹಾದೇವಿ ತೇಲಿ ೩೦೦೦ ಮೀ ಓಟದಲ್ಲಿ ದ್ವಿತೀಯ ಹಾಗೂ ೮೦೦ ಮೀ ಓಟದಲ್ಲಿ ದ್ವಿತೀಯ, ಸಂಜನಾ ಮೊರೆ ೧೫೦೦ ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬಾಲಕರ ವಿಭಾಗದಲ್ಲಿ ರವಿಶಂಕರ ಪೋಲಾದೆ ೧೦೦ ಮೀ ಓಟದಲ್ಲಿ ಪ್ರಥಮ, ೫೦೦೦ ಮೀ ನಡಿಗೆಯಲ್ಲಿ ದ್ವಿತೀಯ, ಪುನೀತ ಚೌಡ್ಮಿ ೮೦೦ ಮೀ ಓಟದಲ್ಲಿ ಪ್ರಥಮ, ರಾಘವೇಂದ್ರ ಕರ್ಜಗಿ ೪೦೦ ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಗುರು ರವಿಕುಮಾರ ನಾಯಕ, ದೈಹಿಕ ಶಿಕ್ಷಕ ತುಕಾರಾಮ ಕುಂಬಾರ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ, ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಗಳು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

