ವಿಜಯಪುರ: ಮನಗೂಳಿ ಪಟ್ಟಣ ಪಂಚಾಯತಿಯ ವತಿಯಿಂದ ಡೇ-ನಲ್ಮ್ ಅಭಿಯಾನದ ಉಪ ಘಟಕಗಳು ಮತ್ತು ಪಿಎಂಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ದಿಸಿಕೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಕ್ಕೆ ಇಂಟರ್‌ನಶಿಪ್ ತರಬೇತಿಗಾಗಿ ಪದವಿ-ಸ್ನಾತಕೋತ್ತರ ಪದವಿ-ಡಿಪ್ಲೋಮಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ-ಸ್ನಾತಕೋತ್ತರ ಪದವಿ-ಡಿಪ್ಲೋಮಾ ಹೊಂದಿದ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ ದಿನಾಂಕ : ೦೯-೦೯-೨೦೨೪ ರ ಸಂಜೆ ೫ ರೊಳಗೆ ಡೇ-ನಲ್ಮ್ ಶಾಖೆಗೆ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸುವಂತೆ ಮನಗೂಳಿ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
