ಚಡಚಣ: ಪಠ್ಯಕ್ಕೆ ನೀಡುವಷ್ಟು ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಗಳಿಗೆ ನೀಡಿದರೆ ಮಾತ್ರ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿ ಸಾಧ್ಯ ಎಂದು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಹಿರಿಯ ನಿರ್ದೇಶಕ, ಸಾಹಿತಿ ಬಸವರಾಜ ಯಂಕಂಚಿ ಹೇಳಿದರು.
ಪಟ್ಟಣದ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ವಿಜಯಪೂರ ಮತ್ತು ಶ್ರೀ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಚಡಚಣ ತಾಲೂಕಾ ಮಟ್ಟದ ಅಥ್ಲೆಟಿಕ್ಸ ಕ್ರೀಡಾ ಕೂಟದ ಧ್ವಜಾರೋಣವನ್ನು ನೆರವೇರಿಸಿ ಅವರು ಮಾತನಾಡಿದರು.
ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎಸ್.ಎಸ್.ಚೋರಗಿ ಮಾತನಾಡಿ, ಕ್ರೀಡೆಯಲ್ಲಿ ಸಾಧನೆ ಮಾಡಿದರೆ ಹೆಸರಿನೊಂದಿಗೆ ಹಣವನ್ನು ಮತ್ತು ನೌಕರಿಯನ್ನು ಪಡೆಯಬಹುದು ಎಂದು ಹೇಳಿದರು.
ನಿವೃತ್ತ ಪ್ರಾಧ್ಯಾಪಕ ಆರ್.ಪಿ.ಬಗಲಿ ಮಾತನಾಡಿದರು.
ಸಂಸ್ಥೆಯ ಹಿರಿಯ ನಿರ್ದೇಶಕ ಎಸ್.ಆರ್.ಅವಜಿ ಕಾರ್ಯಕ್ರಮ ಉಧ್ಘಾಟಿಸಿದರು. ಗೌರವ ಕಾರ್ಯದರ್ಶಿ ವಿ.ಎಸ್.ಗಿಡವೀರ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.
ಸಂಸ್ಥೆಯ ಉಪಾಧ್ಯಕ್ಷ ವಿ.ಜಿ.ಮುತ್ತಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಾಗಮ್ಮ ಅಂಕದ, ನಿವೃತ್ತ ಪ್ರಾಚಾರ್ಯ ಎಸ,ಕೆ,ಕುಲಕರ್ಣಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಮನೋಜ ಕಟಗೇರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಮಲ್ಲಿಕಾರ್ಜುನ ಅರಳಿಕಟ್ಟಿ ವಂದಿಸಿದರು, ಪ್ರೊ ಎಸ್.ಸಿ.ಕಾಮಗೊಂಡ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ವಿವಿದ ಮಹಾವಿದ್ಯಾಲಯಗಳ ಸುಮಾರು ೩೦೦ ಕ್ರೀಡಾಪಟುಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಂಜೆ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

