Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ಸಂದೇಶ ಸಮಾಜಕ್ಕೆ ಮುಟ್ಟಿಸುವಲ್ಲಿ ಶಸಾಪ ಕೊಡುಗೆ ಅಪಾರ
(ರಾಜ್ಯ ) ಜಿಲ್ಲೆ

ಶರಣರ ಸಂದೇಶ ಸಮಾಜಕ್ಕೆ ಮುಟ್ಟಿಸುವಲ್ಲಿ ಶಸಾಪ ಕೊಡುಗೆ ಅಪಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ೧೨ ನೇ ಶತಮಾನದ ಬಸವಾದಿ ಶರಣರ ವಚನ ಸಾಹಿತ್ಯ, ಅವರ ವಿಚಾರಗಳನ್ನು ಸಮಾಜಕ್ಕೆ ಮುಟ್ಟಿಸುವಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಕೊಡುಗೆ ಅಪಾರವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಪಿ.ಎಲ್.ಹಿರೇಮಠ ಹೇಳಿದರು.
ಪಟ್ಟಣದ ಇವಣಗಿ ರಸ್ತೆಯಲ್ಲಿರುವ ನ್ಯೂ ಹೈಸ್ಕೂಲ್ದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ನ್ಯೂ ಹೈಸ್ಕೂಲ್ ಸಹಯೋಗದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಮತ್ತು ಲಿಂ.ಬಿ.ಎಸ್.ಪಾಟೀಲ ಮಹಾರಾಜರು, ಲಿಂ. ಶ್ರೀಶೈಲಪ್ಪ ಬಾಪುರಾಯ ಧನಶೆಟ್ಟಿ, ಲಿಂ.ಸಿದ್ಲಿಂಗಪ್ಪ ಮತ್ತು ಬಸಲಿಂಗಯ್ಯ ಹಿರೇಮಠ ಸ್ಮರಣಾರ್ಥಿ ಗುರುವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುತ್ತೂರಿನ ಲಿಂ. ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರು ಜನಸಾಮಾನ್ಯರಿಗೆ ಶರಣರ ಸಂದೇಶ, ಸಾಹಿತ್ಯ ತಲುಪಬೇಕು. ನಾಡಿನಲ್ಲಿ ಶರಣರ ವಿಚಾರಗಳು ಹರಡಬೇಕೆಂಬ ಉದ್ದೇಶದಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸ್ಥಾಪನೆ ಮಾಡಿದ್ದಾರೆ. ಸಾಮಾನ್ಯವಾಗಿ ಮಠಗಳು ಎಂದರೆ ಒಂದು ರೀತಿಯ ಸಂಪ್ರದಾಯದ ವ್ಯವಸ್ಥೆಯ ದೃಷ್ಟಿಕೋನದಲ್ಲಿ ನೋಡುವ ಕಾಲದಲ್ಲಿ ಇಡೀ ಸಮಾಜದ ವ್ಯವಸ್ಥೆಯನ್ನು ಬದಲಾವಣೆ ತರುವ ಉದ್ದೇಶದಿಂದ ಸತ್ಸಂಪ್ರದಾಯ ಪಾಲಿಸುತ್ತಾ ಸಮಕಾಲೀನ ಅಗತ್ಯಗಳಿಗೆ ಸ್ಪಂದಿಸುತ್ತಾ ಆಧುನಿಕ ಸಮಾಜ ಒಪ್ಪುವಂತಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಜೊತೆಗೆ ವಿದ್ಯೆ, ಜ್ಞಾನ ನೀಡಲು ಮುಂದಾದರು. ಶ್ರೀಗಳು ಜನರಿಗೆ ಜ್ಞಾನ ದಾಸೋಹ, ಅನ್ನ ದಾಸೋಹ ಮಾಡುವ ಜೊತೆಗೆ ಶರಣ ಸಾಹಿತ್ಯ ಪರಿಷತ್ತು ಸ್ಥಾಪನೆ ಮಾಡಿದ್ದು ಒಂದು ಮಹತ್ವದ ಸಂಗತಿಯಾಗಿದೆ. ನಾಡಿನಲ್ಲಿ ಪರಿಷತ್ತಿನ ಮೂಲಕ ನಿರಂತರ ಶರಣ ಸಾಹಿತ್ಯ ಪ್ರಸಾರವಾಗುತ್ತಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತಿ ಶಿಕ್ಷಕ ಎಫ್.ಡಿ.ಮೇಟಿ ಮಾತನಾಡಿ, ಶರಣ ಸಾಹಿತ್ಯ ಪರಿಷತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ, ವಿವಿಧ ಕಾರ್ಯಕ್ರಮ, ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ನಾಡಿನಲ್ಲಿ ಬಸವಾದಿ ಶರಣರ ಸಂದೇಶಗಳನ್ನು ಬಿತ್ತರಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಯುವಜನಾಂಗಕ್ಕೆ ಶರಣರ ಸಂದೇಶ ತುಂಬಾ ಮುಖ್ಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ ಮಾತನಾಡಿ, ಶರಣರ ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಉದ್ದೀಪನಗೊಳಿಸುವ ದಿಸೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತನ್ನು ಕಟ್ಟಿದ ಸುತ್ತೂರಿನ ಲಿಂ.ಡಾ.ರಾಜೇಂದ್ರ ಸ್ವಾಮೀಜಿ ಅವರ ಸ್ಮರಣಾರ್ಥ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವನ್ನಾಗಿ ಆಗಷ್ಟ್ ೨೯ ರಂದು ರಾಜ್ಯಾದ್ಯಂತವಾಗಿ ಆಚರಿಸಲಾಗುತ್ತದೆ.ಯುವಕರು, ವಿದ್ಯಾರ್ಥಿಗಳು ಹಾಗೂ ಮಕ್ಕಳು ಶರಣರ ಚಿಂತನೆ ಮತ್ತು ಶರಣರ ವಚನಗಳನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ಸಮಾಜವನ್ನು ಸುಧಾರಣೆ ಮಾಡಬಹುದು.ವಚನ ಸಾಹಿತ್ಯದ ಸಾರ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ವಚನ ಸಾಹಿತ್ಯ ಮತ್ತು ಶರಣರ ಚಿಂತನೆಯನ್ನು ಮುಂದಿನ ಪೀಳಿಗೆಯವರಿಗಾಗಿ ಉಳಿಸಿ ಬೆಳೆಸಲು ಪ್ರಯತ್ನಿಸಬೇಕೆಂದರು.
ವೇದಿಕೆಯಲ್ಲಿ ನಿವೃತ್ತ ಉಪಪ್ರಾಚಾರ್ಯ ಎಸ್.ಎಸ್.ಝಳಕಿ, ನಿವೃತ್ತ ಉಪನ್ಯಾಸಕ ಎಸ್.ಎಚ್.ಬಿರಾದಾರ, ನಿವೃತ್ತ ಬ್ಯಾಂಕ್ ಅಧಿಕಾರಿ ವಿರೇಶ ಕುಂಟೋಜಿ, ನಿವೃತ್ತ ಶಿಕ್ಷಕ ಎಸ್.ಜಿ.ಮೊಕಾಶಿ, ನಿವೃತ್ತ ಎಲ್ಐಸಿ ಅಧಿಕಾರಿ ವಿವೇಕಾನಂದ ಕಲ್ಯಾಣಶೆಟ್ಟಿ, ಶಾಲೆಯ ಮುಖ್ಯಗುರು ಎಸ್.ಬಿ.ಹಿರೇಮಠ ಇತರರು ಇದ್ದರು. ಎಸ್.ಬಿ.ಹಿರೇಮಠ ಸ್ವಾಗತಿಸಿ,ನಿರೂಪಿಸಿ, ವಂದಿಸಿದರು. ಇದೇ ಸಂದರ್ಭದಲ್ಲಿ ವಚನ ಗಾಯನ ಸ್ಪರ್ಧೆಯಲ್ಲಿ ವಿಜೇತರಾದ ಆಯಿಷಾ ಕರ್ಜಗಿ(ಪ್ರಥಮ), ರಾಜು ದವಾಖಾನೆ(ದ್ವಿತೀಯ), ಲಕ್ಷ್ಮೀ ತೆಲಗಿ, ಸಿದ್ದಾರ್ಥ ಅಳ್ಳೊಳ್ಳಿ (ತೃತೀಯ) ವಿದ್ಯಾರ್ಥಿಗಳಿಗೆ ನಗದು ಹಣ, ಪ್ರಶಸ್ತಿ ಪತ್ರ ವಿತರಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.