Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಕ್ಷಮೆ ಕೋರಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ
(ರಾಜ್ಯ ) ಜಿಲ್ಲೆ

ಸಿಎಂ ಕ್ಷಮೆ ಕೋರಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂದ ಸಿಎಂ

ಬೆಂಗಳೂರು: ಕಳೆದ ಶನಿವಾರ ನಗರದ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ವಿಧಾನಸಭೆ ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ” ಎಂದು ಪದ ಬಳಕೆ ಮಾಡಿದ ನಂತರ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ‘ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಕೂಡಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅರವಿಂದ ಬೆಲ್ಲದ, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ. ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ” ಎಂದು ಕೋರಿದ್ದಾರೆ.
ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ” ಎಂದು ಹೇಳಿದ್ದಾರೆ.
“ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ” ಎಂದಿದ್ದಾರೆ.
“ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ” ಎಂದು ಬೆಲ್ಲದ್ ಕ್ಷಮೆಯಾಚನೆಯನ್ನು ಸಿಎಂ ಒಪ್ಪಿಕೊಂಡಿದ್ದಾರೆ.
“ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ” ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.