ವಿಜಯಪುರ: ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ : ೨೫-೦೯-೨೦೨೪ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ:೦೮೩೫೨-೨೫೧೦೮೫, ಮೊಬೈಲ್ ೮೭೯೨೧೮೫೧೪೧ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
