Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಣ್ಣಿನ, ಫೈಬರ್ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆರ್ಥಿಕ ಸಹಾಯ
(ರಾಜ್ಯ ) ಜಿಲ್ಲೆ

ಮಣ್ಣಿನ, ಫೈಬರ್ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆರ್ಥಿಕ ಸಹಾಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸ್ವಾಮಿ ವಿವೇಕಾನಂದ ಸೇನೆ & ಶ್ರೀ ಗಜಾನನ ಮಹಾಮಂಡಳ ಸಭೆ

ವಿಜಯಪುರ: ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ, ಮಣ್ಣಿನ ಮೂರ್ತಿಗಳನ್ನು ಹಾಗೂ ಫೈಬರ್ ಗಣೇಶ ಮೂರ್ತಿಗಳನ್ನು ಸ್ಥಾಪಿಸಿದರೆ, ಆರ್ಥಿಕ ಸಹಾಯ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ತಿಳಿಸಿದರು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣಲ್ಲಿರುವ ಶ್ರೀ ಶಿವಾನುಭವ ಮಂಟಪದಲ್ಲಿ ಮಂಗಳವಾರ ಸಂಜೆ ನಡೆದ ಸ್ವಾಮಿ ವಿವೇಕಾನಂದ ಸೇನೆ ಶ್ರೀ ಗಜಾನನ ಮಹಾಮಂಡಳ-೨೦೨೪ ಸಭೆಯಲ್ಲಿ ಅವರು ಮಾತನಾಡಿದರು.
ಪರಿಸರ ರಕ್ಷಣೆಯ ಸಂಕಲ್ಪದೊಂದಿಗೆ ಪರಿಸರಕ್ಕೆ ಮಾರಕವಾದ ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ, ಫೈಬರ್ ಹಾಗೂ ಮಣ್ಣಿನ ಮೂರ್ತಿಗಳ ಸ್ಥಾಪನೆಗೆ ನಗರದಲ್ಲಿರುವ ೫೦೦ಕ್ಕೂ ಹೆಚ್ಚು ಗಜಾನನ ಮಂಡಳಿಗಳು ಮುಂದಾದರೆ, ನಗರ ಶಾಸಕರು ಹಾಗೂ ತಂದೆಯವರಾದ ಬಸನಗೌಡ ಪಾಟೀಲ ಯತ್ನಾಳ ಅವರು, ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದ್ದು, ಹೀಗಾಗಿ ಪರಿಸರ ಸಂರಕ್ಷಣೆಗೆ ಎಲ್ಲ ಮಂಡಳಿಗಳು ಕೈಜೋಡಿಸಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ್ ಅಣ್ಣಿಗೇರಿ ಮಾತನಾಡಿ, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ನಿರ್ದೇಶನದಂತೆ, ನಗರದಲ್ಲಿರುವ ಪ್ರತಿ ಗಜಾನನ ಮಂಡಳಿಗಳಿಗೆ ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆ ಪುಸ್ತಕ ವಿತರಿಸಲು ನಿರ್ಧರಿಸಲಾಗಿದ್ದು, ಗಜಾನನ ಮಹಾಮಂಡಳ ವೇದಿಕೆಗೆ ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಬಾಯಿ ಪಟೇಲ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ನಗರ ಪ್ರದೇಶದಲ್ಲಿ ಸಸಿ ನೆಟ್ಟು ಗಿಡ ಬೆಳಸಲು ತಿರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಪ್ರತಿ ಗಜಾನನ ಮಂಡಳಿಗಳ ವೇದಿಕೆಯಲ್ಲಿ ನಡೆದಾಡುವ ದೇವರಾಗಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ಇಡಲು ಕೋರಿ, ಶಾಂತಿ ಸೌಹಾರ್ದತೆಯಿಂದ ಹಾಗೂ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸಲು ಕರೆ ನೀಡಿದರು.
ಡಿಎಸ್‌ಪಿ ಬಸವರಾಜ್ ಎಲಿಗಾರ ಮಾತನಾಡಿ, ಗಜಾನನ ಮಂಡಳಿಗಳು ಮೆರವಣಿಗೆಯ ಸಂದರ್ಭದಲ್ಲಿ ಭಕ್ತಿ ಗೀತೆಗಳನ್ನು ಹಾಕುವುದರೊಂದಿಗೆ ನಮ್ಮ ಸಂಸ್ಕೃತಿಯನ್ನು ಉಳಿಸಬೇಕು. ಸಾರ್ವಜನಿಕರು, ವಯೋವೃದ್ಧರಿಗೆ ತೊಂದರೆಯಾಗದಂತೆ ಮತ್ತು ಶಬ್ದಮಾಲಿನ್ಯದಿಂದ ಉಂಟಾಗುವ ಹಾನಿ ತಡೆಗಟ್ಟಲು ಗಜಾನನ ಮಂಡಳಿಗಳು ಪೊಲೀಸ್ ಇಲಾಖೆ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಿದ್ದೇಶ್ವರ ಸಂಸ್ಥೆ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ್, ನಿರ್ದೇಶಕರಾದ ಸಾಯಬಣ್ಣ ಬೋವಿ, ಸದಾಶಿವ ಗುಡ್ಡೋಡಗಿ, ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿರ್ದೇಶಕ ಗುರು ಗಚ್ಚಿನಮಠ, ವಿಡಿಎ ಮಾಜಿ ಅಧ್ಯಕ್ಷ ಪರಶುರಾಮ ರಜಪೂತ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗೀಮಠ, ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ಜವಾಹರ ಗೋಸಾವಿ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ಕುಮಾರ ಗಡಗಿ, ವಿಠ್ಠಲ ಹೊಸಪೇಟ, ಯುವ ಮುಖಂಡರಾದ ಸಂತೋಷ ಪಾಟೀಲ, ಸಚೀನ ಕುಮಸಿ, ಗಿರೀಶ ಬಿರಾದಾರ, ಚಂದ್ರು ಚೌದರಿ, ಸಂತೋಷ ತಳಕೇರಿ, ಪ್ರಕಾಶ ಚವ್ಹಾಣ, ಹನುಮಂತ ಚಿಂಚಲಿ, ದತ್ತಾ ಗೋಲಾಂಡೆ ಸೇರಿದಂತೆ ನಗರದ ಸಮಸ್ತ ಗಜಾನನ ಮಂಡಳಿಗಳ ಪದಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಅಭಿಮಾನಿಗಳು ಉಪಸ್ಥಿತರಿದ್ದರು.

ಪದಾಧಿಕಾರಿಗಳ ನೇಮಕ

ಸ್ವಾಮಿ ವಿವೇಕಾನಂದ ಸೇನೆ ಶ್ರೀ ಗಜಾನನ ಮಹಾಮಂಡಳ-೨೦೨೪ರ ಅಧ್ಯಕ್ಷರನ್ನಾಗಿ ಸಂದೀಪ ಪಂಗಡವಾಲೆ, ಉಪಾಧ್ಯಕ್ಷರನ್ನಾಗಿ ಪ್ರಶಾಂತ ದೇಸಾಯಿ, ಪ್ರಧಾನ ಕಾರ್ಯದರ್ಶಿಗಳನ್ನಾಗಿ ಪರಶುರಾಮ ಕೊಂಚಿಕೋರವೇರ, ಕರಮವೀರಸಿಂಗ್ ಸಂಧು, ಸಚೀನ ಬಡಾವಣೆ, ಕಾರ್ಯದರ್ಶಿಗಳನ್ನಾಗಿ ಸಂತೋಷ ತೆಲಸಂಗ, ರವಿ ಅಗಸರ, ಶಿವು ಭಜಂತ್ರಿ, ಮನೋಜ ಸುರಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷರಾದ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.

ಬಹುಮಾನ ವಿವರ

ಅತ್ಯುತ್ತಮ ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಕ್ಕೆ, ಹಿಂದೂ ಸಾಂಪ್ರದಾಯಿಕ ವಾದ್ಯಗಳ ಭವ್ಯ ಮೆರವಣಿಗೆಗೆ ಹಾಗೂ ಉತ್ತಮ ಅಲಂಕಾರ ಮಾಡಿದ ಗಣೇಶ ಮಂಡಳಿಗೆ ತಲಾ ರೂ.೨೧ ಸಾವಿರ ಬಹುಮಾನ ನೀಡಲು ನಿರ್ಣಯಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.