ಸಿಂದಗಿ: ಸರಕಾರಿ ಆಸ್ಪತ್ರೆಗಳ ಸುಧಾರಣೆ ಹಾಗೂ ಜನಸ್ನೇಹಿಯಾಗಿಸುವ ಪ್ರಯತ್ನವನ್ನು ಸರ್ಕಾರ ನಡೆಸಿದೆ. ಸರಕಾರದಿಂದ ದೊರೆಯುವ ಆರೋಗ್ಯ ಸೌಲಭ್ಯಗಳನ್ನು ಬಡ ಜನತೆಗೆ ಸರಿಯಾಗಿ ತಲುಪಿಸುವ ಕಾರ್ಯವಾಗಲಿ ಎಂದು ಇಂಡಿ ಉಪವಿಭಾಗಾಧಿಕರಿ ಅಬೀದ್ ಗದ್ಯಾಳ ಹೇಳಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಸಾಯಂಕಾಲ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಬೇಕು. ಬಡ ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಹೆಚ್ಚಿನ ನಿಗಾವಹಿಸಬೇಕು. ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಬೆಳವಣಿಗೆಗೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಸಿದರು.
ಈ ವೇಳೆ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಡಾ.ರಮೇಶ ರಾಠೋಡ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಇದ್ದರು.
Subscribe to Updates
Get the latest creative news from FooBar about art, design and business.
ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ :ಎಸಿ ಗದ್ಯಾಳ
Related Posts
Add A Comment

