ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ನಿಡಗುಂದಿ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಸೆಪ್ಟೆಂಬರ್ ೧೧ ರಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್‌ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦) ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಇವರು ಅಂದು ಬೆಳಿಗ್ಗೆ ೧೧ ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಸೇರಿದಂತೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಟಿ.ಮಲ್ಲೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸೆ.೧೧ರಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
Related Posts
Add A Comment
