ವಿಜಯಪುರ: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ
೬ ರಿಂದ ೧೮ ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ತಲಾ ರೂ. ೧೦,೦೦೦/- ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಲಾಗುವುದು.
ಪ್ರಕರಣವು ಆಗಸ್ಟ್ ೧, ೨೦೨೩ ರಿಂದ ಜುಲೈ ೩೧, ೨೦೨೪ ರೊಳಗೆ ನಡೆದಿರಬೇಕು. ಆಗಸ್ಟ್ ೧, ೨೦೦೬ ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.೨೫,೦೦೦ ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ ೧,೦೦,೦೦೦ ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಮಕ್ಕಳ ದಿನಾಚರಣೆಯೆಂದು ಪ್ರದಾನ ಮಾಡಿ, ಗೌರವಿಸಲಾಗುತ್ತದೆ.
ಅರ್ಹರು ಅರ್ಜಿ ನಮೂನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಿಂದ ಪಡೆದು, ಭರ್ತಿ ಮಾಡಿ, ಉಪ ನಿರ್ದೇಶಕರ ಕಛೇರಿಗೆ ಸಪ್ಟೆಂಬರ್ ೧೯, ೨೦೨೪ ರೊಳಗಾಗಿ ಸಲ್ಲಿಸುವಂತೆಯೂ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೯೫೩೫೩ ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Related Posts
Add A Comment
