ವಿಜಯಪುರ: ಗಾಣಿಗ ಗುರುಪೀಠದ ಜಯದೇವ ಜಗದ್ಗುರುಗಳ ಜಯಂತಿ, ನೂತನ ಕರ್ತೃ ಗದ್ದುಗೆ ಉದ್ಘಾಟನೆ, ಪ್ರತಿಭಾ ಪುರಸ್ಕಾರ
ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಸಂಘ ಮತ್ತು ಶ್ರೀ ಜಗದ್ಗುರು ಜಯದೇವ ಶಿವಯೋಗೇಶ್ವರ ಟ್ರಸ್ಟ, ವಿಜಯಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ದಿನಾಂಕ 02-10-2024 ರಂದು ವನಶ್ರೀ ಸಂಸ್ಥಾನಮಠ ಗಾಣಿಗ ಗುರುಪೀಠದ ಜಯದೇವ ಜಗದ್ಗುರುಗಳ ಜಯಂತಿ ಆಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಇದೇ ವೇಳೆ ಪೂಜ್ಯರ ಕರ್ತೃ ಗದ್ದುಗೆಯ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರದ ಜಿ.ಪಂ ಬಳಿಯ ವನಶ್ರೀ ಮಠದಲ್ಲಿ ಆಚರಿಸಲಾಗುವುದು ಎಂದು ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಸಂಘದ ಅಧ್ಯಕ್ಷ ಬಿ.ಬಿ.ಪಾಸೋಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯಲ್ಲಿ 2023-24ನೇ ಸಾಲಿನ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿ/ನಿಯರಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿ ಪ್ರೋತ್ಸಾಹ ಧನದೊಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಕಾರಣ ಜಿಲ್ಲಾ ಮಟ್ಟದಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನದಲ್ಲಿ ಶೇ.90 ಕ್ಕಿಂತಲೂ ಅಧಿಕ ಮತ್ತು ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.85 ಕ್ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿ/ನಿಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಮೇಲಿನ ನಿಯಮವು ಗಡಿನಾಡಿನ ತಾಲ್ಲೂಕಗಳ ಕನ್ನಡ ಮಾಧ್ಯಮದ ಸಮಾಜದ ವಿದ್ಯಾರ್ಥಿಗಳಿಗೂ ಅನ್ವಯಿಸುವುದು.
ಪ್ರತಿಭಾನ್ವಿತ ವಿದ್ಯಾರ್ಥಿಗಳು ಅರ್ಜಿಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಗಳಿಗೆ ಸಲ್ಲಿಸಬಹುದು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಮತ್ತು ಆಧಾರ ಕಾರ್ಡ ಸಮೇತ ಮಾಹಿತಿಯನ್ನು ವಿಜಯಪುರ ನಗರದ ಜಲನಗರ ಸರ್ಕಲ್, ಕೋರ್ಟ್ ಹತ್ತಿರವಿರುವ ದಿ ಕರ್ನಾಟಕ ಕೋ-ಆಪರೇಟಿವ್ ಸೊಸೈಟಿ (ಬ್ಯಾಂಕ) ನಲ್ಲಿ ಖುದ್ದಾಗಿ ಅಥವಾ ಅಂಚೆ ಮೂಲಕ ದಿನಾಂಕ :18-09-2024 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬಿ. ಬಿ. ಪಾಸೋಡಿ, ಅಧ್ಯಕ್ಷರು ಮೊ-9448037434, ಬಿ ಕೆ ಚೌಧರಿ, ಕೋಶಾಧ್ಯಕ್ಷರು ಮೊ-9823191101 ಮತ್ತು ಡಾ. ಬಾಬು ಜಿ. ಸಜ್ಜನ, ಪ್ರಧಾನ ಕಾರ್ಯದರ್ಶಿ ಮೊ-9480120391 ಅವರುಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

