Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಅನನ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ

ವಿಜಯಪುರ: ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರ ಕಾರ್ಯ ಅನನ್ಯವಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿ ಪಾಠ ಬೊಧನೆ ಮಾಡುವ ಮೂಲಕ ಮುಂದಿನ ಉತ್ತಮ ನಾಗರಿಕರನ್ನಾಗಿ ರೂಪಿಸುವ ಬಹು ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ಮಕ್ಕಳ ಅಂತರಾಳವನ್ನು ಅರಿತು, ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಗುರು ಶಿಷ್ಯ ಪರಂಪರೆ ಪ್ರಾಚೀನ ಕಾಲದಿಂದಲೂ ಇದೆ. ಗುರುವನ್ನು ದೇವರನ್ನಾಗಿ ಕಾಣುವ ದೇಶ ನಮ್ಮದು. ದೇಶದ ಭವಿಷ್ಯ ಎಂದು ಮಕ್ಕಳನ್ನು ಕರೆಯುತ್ತೇವೆ. ಅಂತಹ ಮಕ್ಕಳ ಭವ್ಯ ಭವಿಷ್ಯವನ್ನು ರೂಪಿಸಿ ಸುಭದ್ರ ದೇಶ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಬಹುಮುಖ್ಯವಾಗಿದ್ದು, ಮಕ್ಕಳಿಗೆ ಶಿಕ್ಷಕರು ತತ್ವಜ್ಞಾನಿಯಾಗಿ ಮಾರ್ಗದರ್ಶಕರಾಗಿ ಅವರ ಸುಂದರ ಕನಸಿಗೆ ಪ್ರೇರಣಾದಾಯಕವಾಗಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಶಿಕ್ಷಕರು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಶಿಕ್ಷಣ ಗುಣಮಟ್ಟ ಹೆಚ್ಚಿಸುವಲ್ಲಿ ವಿವಿಧ ಶೈಕ್ಷಣಿಕಾ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್. ಎಚ್. ನಾಗೂರ, ಪ್ರತಿ ವ್ಯಕ್ತಿಯೂ ಗೌರವದಿಂದ ಬದುಕು ನಡೆಸಲು ಗುರುಗಳ ಪಾತ್ರ ಅಪಾರವಾಗಿದೆ. ಆತ್ಮ ಸಂತೋಷದಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಶೈಕ್ಷಣಿಗ ಪ್ರಗತಿಗೆ ಕೊಡುಗೆ ನೀಡಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಜಯಪುರ ಮಹಾನಗರಪಾಲಿಕೆ ಮಹಾಪೌರರಾದ ಮಹೇಜಬಿನ್ ಹೊರ್ತಿ, ವಿಜಯಪುರ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ, ಭಾರತ ಸೇವಾದಳ ಹಾಗೂ ಸ್ಕೌಟ್ಸ್ ಗೈಡ್ಸ್ ಮಕ್ಕಳು, ಜಿಲ್ಲೆಯ ವಿವಿಧ ತಾಲೂಕಿನಿಂದ ಆಗಮಿಸಿದ ಶಿಕ್ಷಕರು, ಅಧಿಕಾರಿಗಳು ಉಪಸ್ಥಿತರಿದ್ದರು.

೨೧ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಕಾರ್ಯಕ್ರಮದಲ್ಲಿ ಜಿಲ್ಲೆಯ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ಮೂರು ವಿಭಾಗದಿಂದ ೨೧ ಜನ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ೬೦ ಜನ ನಿವೃತ್ತ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ೨೦೨೪-೨೫ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ವಿವಿಧ ಕಾರ್ಯಕ್ರಮಗಳ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.