Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರಿಗೆ ಸಮಾಜ ಸುಧಾರಣೆ ಮಾಡುವ ಶಕ್ತಿಯಿದೆ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ಶಿಕ್ಷಕರಿಗೆ ಸಮಾಜ ಸುಧಾರಣೆ ಮಾಡುವ ಶಕ್ತಿಯಿದೆ :ಬೆಳ್ಳುಬ್ಬಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಭಗವಂತ ನಮಗೆ ನೀಡಿದ ಹುದ್ದೆಯಲ್ಲಿ ಯಾವುದೇ ಮುಖವಾಡ ಧರಿಸದೇ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಮೂಲಕ ಆ ಹುದ್ದೆಗೆ ನ್ಯಾಯ ಒದಗಿಸಿದರೆ ಅದರಲ್ಲಿ ನಾವು ಖಂಡಿತ ಯಶಸ್ಸು ಸಾಧಿಸಬಹುದು ಎಂದು ಧಾರವಾಡ ವಾಣಿಜ್ಯ ತೆರಿಗೆ ಇಲಾಖೆಯ ಉಪಆಯುಕ್ತ ಶಂಕರ ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ನಾವು ಯಾವುದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದರೂ ಆ ಹುದ್ದೆಗೆ ಮೋಸವಾಗದಂತೆ ಕಾರ್ಯ ಮಾಡುವುದು ಬಹು ಮುಖ್ಯ. ಶಿಕ್ಷಕ ಬಾಂಧವರ ಮೇಲೆ ಸಮಾಜದ ನಿರೀಕ್ಷೆ ಬಹಳಷ್ಟಿದೆ. ಶಿಕ್ಷಕರಲ್ಲಿರುವ ಅದ್ಭುತ ಶಕ್ತಿಯಿಂದಾಗಿ ಮಕ್ಕಳು ರಾಷ್ಟ್ರಪತಿ, ಪ್ರಧಾನಿ ಹುದ್ದೆ, ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಯಾವುದೇ ಹುದ್ದೆಗಳನ್ನು ಪಡೆದುಕೊಳ್ಳಬಹುದು. ಎಲ್ಲ ವೃತ್ತಿಗಿಂತಲೂ ಶಿಕ್ಷಕ ವೃತ್ತಿಯಲ್ಲಿ ಸಂತೃಪ್ತಿ ಸಿಗುತ್ತದೆ. ಶಿಕ್ಷಕರಿಗೆ ಸಮಾಜ ಸುಧಾರಣೆ ಮಾಡುವ ಶಕ್ತಿಯಿದೆ. ಶಿಕ್ಷಕರು ಕೇವಲ ಬಿಲ್-ಬೆಲ್ಗಾಗಿ ಕಾರ್ಯನಿರ್ವಹಿಸುವಂತಾಗಬಾರದು. ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತಾಗಬೇಕೆಂದರು.
ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ನಾನು 7 ವರ್ಷ ಕಾಲ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದೇನೆ. ದೇಶದ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕ ಬಾಂಧವರ ಮೇಲಿದೆ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಕ್ಕರೆ ಅವರು ಸತ್ಪ್ರಜೆಗಳಾಗಿ ಹೊರಹೊಮ್ಮುತ್ತಾರೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕೆಂದರು.
ಸಾನಿಧ್ಯ ವಹಿಸಿದ್ದ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬಿಇಓ ವಸಂತ ರಾಠೋಡ, ಕರವೇ ಮುಖಂಡ ಅಶೋಕ ಹಾರಿವಾಳ ಮಾತನಾಡಿದರು.
ವೇದಿಕೆಯಲ್ಲಿ ಇಟಗಿಯ ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ನ್ಯಾಯವಾದಿ ಬಿ.ಕೆ.ಕಲ್ಲೂರ, ಧುರೀಣರಾದ ಶಿವನಗೌಡ ಬಿರಾದಾರ, ಸಂಗಮೇಶ ಓಲೇಕಾರ, ನೀಲು ನಾಯಕ, ತಾಪಂ ಇಓ ಪ್ರಕಾಶ ದೇಸಾಯಿ, ಅಕ್ಷರ ದಾಸೋಹದ ಅಧಿಕಾರಿ ಎಸ್.ಎಚ್.ಬಿರಾದಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ,ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಪಿ.ನಾಗಾವಿ ಇತರರು ಇದ್ದರು.
ಕ್ಷೇತ್ರ ಸಮನ್ವಯಾಧಿಕಾರಿ ಸುನೀಲ ನಾಯಕ ಸ್ವಾಗತಿಸಿದರು. ಎಸ್.ಎಸ್.ಅಂಬಲಿ, ಭಾರತಿ ಪಾಟೀಲ, ಮಹೇಶ ಪೂಜಾರಿ ನಿರೂಪಿಸಿದರು. ಶರಣು ದಳವಾಯಿ ವಂದಿಸಿದರು.

ಹೃದಯಸ್ಪರ್ಶಿ ಸನ್ಮಾನ

ಕಾರ್ಯಕ್ರಮಕ್ಕೂ ಮುನ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಜ್ಯೋತಿಬಾ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಅಖಂಡ ತಾಲೂಕಿನಲ್ಲಿ ನಿವೃತ್ತಗೊಂಡ ಶಿಕ್ಷಕರನ್ನು, ಸಮಾರಂಭಕ್ಕೆ ಸಹಾಯ-ಸಹಕಾರ ನೀಡಿದ ಮಹನೀಯರನ್ನು ಸನ್ಮಾನಿಸಲಾಯಿತು.
ಉಪನ್ಯಾಸ ನೀಡಿದ ಕೆಎಎಸ್ ಅಧಿಕಾರಿ ಶಂಕರ ಬೆಳ್ಳುಬ್ಬಿ ಅವರು ತಮಗೆ ಕಲಿಸಿದ ಗುರುಗಳಿಗೆ ವೇದಿಕೆಯ ಮೇಲೆ ಸನ್ಮಾನಿಸಿ ಅವರಿಗೆ ನಮಸ್ಕರಿಸುವ ಮೂಲಕ ಗುರು ನಮನ ಸಲ್ಲಿಸಿದ್ದು ಹೃದಯಸ್ಪರ್ಶಿಯಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.