ಚಡಚಣ: ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಒಳ್ಳೆಯ ನಡತೆ ಭೋದನೆಯ ಮೂಲಕ ಮಕ್ಕಳ ಭವಿಷ್ಯದೊಂದಿಗೆ ರಾಷ್ಟ್ರದ ಭವಿಷ್ಯ ನಿರ್ಮಾಣ ಮಾಡುವದು ಶಿಕ್ಷಕರಿಂದ ಮಾತ್ರ ಸಾದ್ಯ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ ಹೇಳಿದರು.
ಸ್ಥಳಿಯ ಗುರು ಕೃಪಾ ಮಂಗಲ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಲಾದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶಿಲ್ದಾರ ಸಂಜಯ ಇಂಗಳೆ, ವಿದ್ಯಾರ್ಥಿಗಳ ಜ್ಞಾನ,ಆತ್ಮ ವಿಶ್ವಾಸ, ಕೌಶಗಳನ್ನು ವೃದ್ಧಿಸಿ,ವ್ಯಕ್ತಿತ್ವ ವಿಕಸನಕ್ಕೆ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸಿವ ಶಿಕ್ಷಕರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು.ಶಿಕ್ಷಕರಿಗೆ ಸಮಾಜದಲ್ಲಿ ಉನ್ನತ ಸ್ಥಾನವಿದೆ. ಅದನ್ನು ಕಾಪಾಡಿಕೊಂಡು ಹೋಗುವದು ಅವರ ಜವಾಬ್ದಾರಿಯಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜೆ.ನಾಯಕ್, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸವಿನೆನಪಿಗಾಗಿ ಶಿಕ್ಷಕರ ದಿನವನ್ನು ಆಚರಿಸುತ್ತೇವೆ. ಅವರ ತತ್ವಾದರ್ಶಗಳನ್ನು ಶಿಕ್ಷಕರು ಪಾಲಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಸ್.ಸೊನಗಿ, ಶಿಕ್ಷಕರ ಸೋಸಾಯಿಟಿ ಅಧ್ಯಕ್ಷ ಎಸ್.ಎಸ್. ಪಾಟೀಲ ಮಾತನಾಡಿದರು.
ಸಾನಿಧ್ಯವಹಿಸಿದ ಅಮಿನಗಡದ ಪಾರ್ವತಿ ಅಮ್ಮನವರು ಆಶಿರ್ವಚನ ನೀಡಿದರು.
ವೇದಿಕೆಯ ಮೇಲೆ ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಮಜ್ಜಗಿ, ಶಿಕ್ಷಕರ ಸಂಘಟನೆಗಳ ವಿವಿಧ ವಿಭಾಗಗಳ ಅಧ್ಯಕ್ಷರುಗಳಾದ ಡಿ.ಎಸ್.ಬಗಲಿ, ಶಂಕರಲಿಂಗ ಪಾಟೀಲ, ಎ.ಬಿ.ಪಾಟೀಲ, ಆರ್.ಎಂ.ಚೋಪಡೆ, ಎ.ಎಸ್.ಕರ್ಜಗಿ, ಆರ್.ಎಂ.ಬಂಡಿ, ಜಿ.ಎಸ್.ಕಾಂಬಳೆ, ಶಂಕರ ಹಾವಿನಾಳ, ರವೀಂದ್ರ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಜೆ.ನಾಡಗೇರ, ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ.ಬಿರಾದಾರ, ಕಾರ್ಯಕ್ರಮದ ನೋಡೆಲ್ ಅಧಿಕಾರಿ ಎಂ.ಎಲ್ ಪಾಂಡ್ರೆ, ಸೇರಿದಂತೆ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು, ಶಿಕ್ಷಣ ಸಂಯೋಜಕರು, ಸಿಆರ್‌ಪಿಗಳು, ಬಿಆರ್‌ಪಿಗಳು ಇದ್ದರು.
ಶಿಕ್ಷಕರಾದ ಗುರು ಜವೂರ ಹಾಗು ಸುನೀಲ ಯಳಮೇಲಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

