Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವ ಸರಪಳಿಯಲ್ಲಿ ಸ್ವಪ್ರೇರಣೆಯಿಂದ ಭಾಗವಹಿಸಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಮಾನವ ಸರಪಳಿಯಲ್ಲಿ ಸ್ವಪ್ರೇರಣೆಯಿಂದ ಭಾಗವಹಿಸಿ :ಡಿಸಿ ಟಿ.ಭೂಬಾಲನ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೆ.೧೫ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ | ಮಾನವ ಸರಪಳಿ ಆಯೋಜನೆ

ವಿಜಯಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಜಿಲ್ಲೆಯಲ್ಲಿ ಸೆ.೧೫ರಂದು ಆಯೋಜಿಸುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಸರ್ಕಾರಿ-ಅರೆ ಸರ್ಕಾರಿ ನೌಕರರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ದೇಶದ ನಾಗರಿಕರಿಗೆ ಅರಿವು ಮೂಡಿಸುವುದು ಮುಖ್ಯ ಉದ್ದೇಶವಾಗಿದೆ. ಈ ದಿಸೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ೨೦೨೪-೨೫ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಮತ್ತು ನಗರ ಯೋಜನಾ ಇಲಾಖೆ, ಪೌರಾಡಳಿತ ಮತ್ತು ಹಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬೀದರಿನಿಂದ ಚಾಮರಾಜ್‌ನಗರದವರೆಗೆ ೨೮೦೦ ಕಿ.ಮೀ. ಮಾನವ ಸರಪಳಿ ಆಯೋಜಿಸುವ ಮೂಲಕ ಆಚರಿಸಲು ಸರ್ಕಾರ ತೀರ್ಮಾನಿಸಿದೆ.
ನೋಡಲ್ ಅಧಿಕಾರಿಗಳು : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಕಾರ್ಯಕ್ರಮದ ಸಂಪೂರ್ಣ ಮೇಲುಸ್ತುವಾರಿ ವಹಿಸಲಾಗಿದೆ.
ಮುದ್ದೇಬಿಹಾಳ ತಾಲೂಕಿನ ವಿರೇಶ ನಗರ ಹಾಗೂ ನಾಲತ್ತವಾಡಕ್ಕೆ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ (ಮೊ:೯೫೯೯೯೦೯೭೨೪), ನಾಗರಬೆಟ್ಟ ಹಾಗೂ ಹಿರೇಮುರಾಳ ಗ್ರಾಮಕ್ಕೆ ಆಹಾರ ಮತ್ತು ನಾಗರೀಕರ ಸರಬರಾಜು ಮತ್ತು ಗ್ರಾಹ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ (ಮೊ: ೮೯೫೧೪೨೦೩೯೯) ಇವರನ್ನು ನೊಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಕವಡಿಮಟ್ಟಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಮುದ್ದೇಬಿಹಾಳಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಆಶಾಪೂರ (ಮೊ: ೯೭೩೧೦೪೨೦೬೩), ಗೆದ್ದಲಮರಿ ಹಾಗೂ ಚಲಮಿ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ (ಮೊ:೯೪೪೮೩೪೨೭೫೪), ಜಟಗಿ ಎಲ್.ಟಿ.ನಂ.-೦೧ ಹಾಗೂ ಎಲ್.ಟಿ.ನಂ.-೦೨ ಮತ್ತು ಹುಲ್ಲೂರ ಎಲ್.ಟಿ. ಗ್ರಾಮಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀಮತಿ ರೂಪಾ ಎಲ್. (ಮೊ:೮೨೭೭೯೩೦೬೦೧) ಇವರನ್ನು ನೇಮಕ ಮಾಡಲಾಗಿದೆ.
ಹುಲ್ಲೂರ ಗ್ರಾಮಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೆಶಕ ಎಲ್.ಎಸ್.ನಾಗೂರ (ಮೊ: ೯೪೪೮೯೯೯೩೩೧), ನಿಡಗುಂದಿ ಗ್ರಾಮಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ (ಮೊ: ೯೮೪೪೮೪೯೨೩೮), ಆಲಮಟ್ಟಿ ಹಾಗೂ ಬಾಗಲಕೋಟೆ ಜಿಲ್ಲೆ ಗಡಿಗೆ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಮತಿ ವನೀತಾ ಆರ್. (ಮೊ: ೯೫೩೫೩೬೬೩೯೨) ಇವರನ್ನು ನೇಮಕ ಮಾಡಲಾಗಿದೆ.
ಸೆ.೧೫ ರಂದು ಬೆಳಿಗ್ಗೆ ೮-೩೦ರಿಂದ ೯-೩೦ರವರೆಗೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಪ್ರಾರಂಭಿಸಿ, ನಾಲತವಾಡ, ನಾಗರಬೆಟ್ಟ, ಹಿರೇಮುರಾಳ, ಕವಡಿಮಟ್ಟಿ, ಮುದ್ದೇಬಿಹಾಳ, ಗೆದ್ದಲಮರಿ, ಚಲಮಿ, ಜಟ್ಟಿಗಿ ತಾಂಡಾ ನಂ.-೧, ಹಾಗೂ ತಾಂಡಾ ನಂ.೨, ಹುಲ್ಲೂರ ತಾಂಡಾ, ಹುಲ್ಲೂರ, ನಿಡಗುಂದಿ ಹಾಗೂ ಆಲಮಟ್ಟಿಯಿಂದ ಬಾಗಲಕೋಟೆ ಜಿಲ್ಲೆಯ ಗಡಿ ಪ್ರವೇಶವರೆಗೆ ಈ ರೀತಿ ಸುಮಾರು ೬೦ ಕಿ.ಮೀ. ವರೆಗೆ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಕಾಲೇಜ್, ಶಾಲೆಗಳಿಂದ ವಸತಿ ನಿಲಯದ ಮಕ್ಕಳು, ಮಹಿಳಾ ಸ್ವ-ಸಹಾಯ ಗುಂಪುಗಳು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಎಲ್ಲ ಸಮುದಾಯದ ಮುಖಂಡರು, ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘಗಳ ಸದಸ್ಯರು, ಪದಾಧಿಕಾರಿಗಳು, ವಿವಿಧ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ನೌಕರ ಸಂಘಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.