Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆ ಅಭಿವೃದ್ಧಿಗೆ ಈವರೆಗೆ ರೂ.೧.೧೦ ಸಾವಿರ ಕೋಟಿ ಅನುದಾನ
(ರಾಜ್ಯ ) ಜಿಲ್ಲೆ

ಜಿಲ್ಲೆ ಅಭಿವೃದ್ಧಿಗೆ ಈವರೆಗೆ ರೂ.೧.೧೦ ಸಾವಿರ ಕೋಟಿ ಅನುದಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಹೆದ್ದಾರಿ ಭೂಮಿ ಪೂಜೆ ನೆರವೇರಿಸಿದ ಸಂಸದ ರಮೇಶ ಜಿಗಜಿಣಗಿ ಮಾಹಿತಿ

ಇಂಡಿ: ನಾನು ಪ್ರಚಾರಪ್ರೀಯನಲ್ಲ. ಸದ್ದಿಲ್ಲದೆ ಅಭಿವೃಧ್ಧಿ ಕೆಲಸ ಮಾಡಿ ಮುಗಿಸಿ ತೃಪ್ತಿಪಡುವುದು ನನ್ನ ಸ್ವಭಾವವಾಗಿದೆ. ಕಳೆದ ೧೦ ವರ್ಷಗಳಲ್ಲಿ ವಿಜಯಪುರ ಜಿಲ್ಲೆಯ ಅಭಿವೃದ್ಧಿಗಾಗಿ ೧ ಲಕ್ಷ ೧೦ ಸಾವಿರ ಕೋಟಿ ರೂ, ಗಳ ಅನುದಾನ ತಂದಿದ್ದೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಅವರು ಸೋಮವಾರ ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ೯೮೪ ಕೋಟಿ ರೂ, ಗಳ ೫೪೮-ಬಿ ರಾಷ್ಟ್ರೀಯ ಹೆದ್ದಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ನನ್ನ ೫೦ ವರ್ಷಗಳ ರಾಜಕೀಯ ಜೀವನಕ್ಕೆ ಇಂಡಿ ಜನತೆ ಜೀವ ತುಂಬಿದ್ದಾರೆ. ಅವರ ಋಣ ಮುಟ್ಟಿಸುವದಕ್ಕಾಗಿ ನನ್ನ ಜೀವ ಒತ್ತೇ ಇಟ್ಟು ಕೆಲಸ ಮಾಡುತ್ತಿದ್ದೇನೆ ಎಂದರು.
ಇಂಡಿ ಕಾಲುವೆಯ ರಿಪೇರಿಗಾಗಿ ೨೭೦೦ ಕೋಟಿ ರೂ, ಗಳ ಅನುದಾನಕ್ಕಾಗಿ ಪ್ರಧಾನ ಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಇಷ್ಟರಲ್ಲಿಯೇ ಮಂಜೂರಾತಿ ಸಿಗುವ ವಿಶ್ವಾಸವಿದೆ ಎಂದರು.
ಇಂದು ಭೂಮಿಪೂಜೆ ನಡೆದ ಈ ೯೮೪ ಕೋಟಿ ರೂ, ಗಳ ಅನುದಾನದ ಸುಮಾರು ೧೦೨ ಕಿಮೀ ಉದ್ದದ ಹೆದ್ದಾರಿ ಕಾಮಗಾರಿ ಶೀಘ್ರವೇ ಪ್ರಾರಂಭಿಸಲಾಗುವದು. ಇದರಲ್ಲಿ ೧೦ ಸೇತುವೆಗಳು ಬರಲಿದ್ದು, ಎಲ್ಲಾ ಕಾರ್ಯಗಳನ್ನು ಬೇಗನೇ ಮುಗಿಸಲು ಸೂಚನೆ ನೀಡಲಾಗಿದೆ ಎಂದರು.
ತಾಲ್ಲೂಕಿನ ಇಂಚಗೇರಿ, ಗುಡ್ಡಗಳಲ್ಲಿ ನೀರು ಸಂಗ್ರಹಿಸಿ, ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವಂತೆ ಕ್ರಮ ಜರುಗಿಸಲಾಗಿದೆ. ೧೨೦ ಕೋಟಿ ಅನುದಾನದಲ್ಲಿ ೭೬ ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಜಲಧಾರೆ ಯೋಜನೆ ಮಾಡಲಾಗಿದೆ. ಕೆಲಸ ಭರದಿಂದ ಸಾಗಿದೆ. ಭೀಮಾ ನದಿಯ ದಂಡೆಗೆ ಇರುವ ಗ್ರಾಮಗಳಿಗೂ ಕೂಡಾ ಕೃಷ್ಣಾ ಮೇಲ್ದಂಡೆ ಯೋಜನೆಯ ಜಲಧಾರೆ ಯೋಜನೆಯಿಂದ ಕುಡಿಯುವ ನೀರು ಒದಗಿಸಲಾಗುತ್ತದೆ ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ಮಾಜಿ ಶಾಸಕ ರಮೇಶ ಬೂಸನೂರ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ಡಿ .ಪಾಟೀಲ, ಚಂದ್ರಶೇಖರ ಕವಟಗಿ, ಕಾಸುಗೌಡ ಬಿರಾದಾರ ಮಾತನಾಡಿದರು.
ವೇದಿಕೆಯಲ್ಲಿ ಬಿಜೆಪಿ ಪ್ರಮುಖರಾದ ಶ್ರೀಪತಿಗೌಡ ಬಿರಾದಾರ, ಶಂಕರಗೌಡ ಪಾಟೀಲ, ಮಲ್ಲಿಕಾರ್ಜುನ ಕಿವಡೆ, ಸಿದ್ದಲಿಂಗ ಹಂಜಗಿ, ಶೀಲವಂತ ಉಮರಾಣಿ, ಅಣ್ಣಪ್ಪ ಖೈನೂರ, ಸಂಜೀವ ಐಹೊಳೆ, ಬಿ.ಎಸ್. ಪಾಟೀಲ, ಶ್ರೀಶೈಲಗೌಡ ಬಿರಾದಾರ, ವಿವೇಕ ಡಬ್ಬಿ, ಉಮೇಶ ಕೋಳಕೂರ, ದೇವೇಂದ್ರ ಕುಂಬಾರ, ಅನೀಲಗೌಡ ಬಿರಾದಾರ, ಅನೀಲ ಜಮಾದಾರ, ಶರಣಗೌಡ ಬಂಡಿ, ಶ್ರೀಶೈಲಗೌಡ ಬಿರಾದಾರ, ವಿರಾಜ ಪಾಟೀಲ, ಎಸ್.ಜೆ. ವಾಲೀಕಾರ, ನಾಗುಗೌಡ ಪಾಟೀಲ (ಅಥರ್ಗಾ), ಪ್ರಕಾಶ ಹಿಟ್ನಳ್ಳಿ, ರವಿ ವಗ್ಗೆ, ರಾಘವೇಂದ್ರ ಕಾಪಸೆ, ಸಂಜು ದಶವಂತ, ಶಾಂತು ಕಂಬಾರ ಸೇರಿದಂತೆ ಇನ್ನಿತರರು ಇದ್ದರು.
ದೇವೇಂದ್ರ ಕುಂಬಾರ ಸ್ವಾಗತಿಸಿದರು. ಮಲ್ಲಿಕಾರ್ಜುನ ಕಿವುಡೆ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.