ವಿಜಯಪುರ: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಇವರ ಸಹಯೋಗದೊಂದಿಗೆ ‘ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ’ ಎಂಬ ವಿಷಯದ ಕುರಿತು ಮಾಧ್ಯಮ ಕಾರ್ಯಗಾರವನ್ನು ದಿ. ೧೧ ಮತ್ತು ೧೨ ರಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಬುಧವಾರ ಬೆಳಗ್ಗೆ ೧೦.೩೦ ಗಂಟೆಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ಯುನಿಸೆಫ್‌ನ ಪ್ರಸೂನ್ ಸೇನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ವಹಿಸಲಿದ್ದು, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಉಪಸ್ಥಿತರಿರಲಿದ್ದಾರೆ.
ತಾಂತ್ರಿಕ ಗೋಷ್ಠಿಗಳು:
ಕಾರ್ಯಾಗಾರದ ಮೊದಲ ತಾಂತ್ರಿಕ ಗೋಷ್ಠಿಯಲ್ಲಿ ‘ಮಕ್ಕಳ ಹಕ್ಕುಗಳು: ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಚೌಕಟ್ಟು ಮತ್ತು ಕಾನೂನುಗಳ’ ಎಂಬ ವಿಷಯದ ಕುರಿತು ಕರ್ನಾಟಕ ಮಕ್ಕಳ ಹಕ್ಕುಗಳ ಸಂಯೋಜಕ ಡಾ. ವಾಸುದೇವ ಶರ್ಮಾ ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ. ಎರಡನೇಯ ಗೋಷ್ಠಿಯಲ್ಲಿ ಯುನಿಸೆಫ್‌ನ ಆರೋಗ್ಯತಜ್ಞ ಡಾ. ಶ್ರೀಧರ ಪ್ರಹ್ಲಾದ ರೈವಂಕಿ ‘ಮಕ್ಕಳ ಆರೋಗ್ಯ ಸಮಸ್ಯೆಗಳ ಮುನ್ನೋಟ: ಎನ್‌ಸಿಡಿಎಸ್ ಮತ್ತು ಮಾನಸಿಕ ಆರೋಗ್ಯ’ ಎಂಬ ವಿಷಯದ ಕುರಿತು ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ.
ದಿ.೧೨ ರಂದು ನಡೆಯುವ ಕಾರ್ಯಗಾರದ ಮೂರನೇ ಗೋಷ್ಠಿಯಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಮಾಧ್ಯಮಗಳ ವರದಿಗಾರಿಕೆ’ ಎಂಬ ವಿಷಯದ ಕುರಿತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಸಪ್ನಾ ಎಂ ಎಸ್ ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ. ನಾಲ್ಕನೇ ಗೋಷ್ಠಿಯಲ್ಲಿ ಭಾರತೀಯ ಮಕ್ಕಳ ಪ್ರತಿಷ್ಠಾನ ಕಾರ್ಯಕ್ರಮ ಸಂಯೋಜಕಿ ಗೌರಿ ಅರಸು ‘ಡಿಜಿಟಲ್ ಸುರಕ್ಷತೆ ಮತ್ತು ಮಕ್ಕಳು’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

