ಗೋಲಗೇರಿ: ಸಿಂದಗಿ ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಗೋಲಗೇರಿ KBMPS ಶಾಲೆಯ ಮಕ್ಕಳು ಗುಂಪು ಆಟಗಳಾದ ಕಬಡ್ಡಿ ಆಟದಲ್ಲಿ ಪ್ರಥಮ ಹಾಗೂ ರಿಲೇ ಓಟದಲ್ಲಿ ಪ್ರಥಮ ಹಾಗೂ ವೈಯಕ್ತಿಕ ಆಟಗಳಾದ ಚಕ್ರ ಎಸೆತದಲ್ಲಿ ಪ್ರಥಮ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೋಲಗೇರಿ ಸಮೂಹ ಸಂಪನ್ಮೂಲ ವ್ಯಕ್ತಿ ಶರಣು ಚಟ್ಟಿ, ಮುಖ್ಯ ಗುರು ಪಿ.ಎಮ್.ಶೇಖ್, ಗುರುಬಸಯ್ಯ ಮಠ, ಯಮನಪ್ಪ ಗುಡಿಮನಿ, ಗ್ರಾಮಸ್ಥರು ಹಾಗೂ ಶಿಕ್ಷಣ ಪ್ರೇಮಿಗಳಾದ ಮಲ್ಕಣ್ಣ ಗಡೆಗೆನ್ನವರ, ರುಕುಮ್ಮುದ್ದಿನ ಪಟೇಲ ಹಳಿಮನಿ, ಮಡಿವಾಳ ನಾಯ್ಕೋಡಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

