Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 25,2026

ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»2028ಕ್ಕೆ ನಾನೇ ಕರ್ನಾಟಕ ಸಿಎಂ :ಸಚಿವ ಜಾರಕಿಹೊಳಿ
(ರಾಜ್ಯ ) ಜಿಲ್ಲೆ

2028ಕ್ಕೆ ನಾನೇ ಕರ್ನಾಟಕ ಸಿಎಂ :ಸಚಿವ ಜಾರಕಿಹೊಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ ಹೇಳಿಕೆ | ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಬೆಂಗಳೂರು: ಕೈ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ಪಕ್ಷದ ಹಿರಿಯರು ಹಾಗೂ ಅನುಭವಸ್ಥರ ನಡುವೆ ಪೈಪೋಟಿ ಶುರುವಾಗಿದೆ. ಎಂಬಿ.ಪಾಟೀಲ್, ಪರಮೇಶ್ವರ್ ಬಳಿಕ ಇದೀಗ ಸಿಎಂ ರೇಸ್ ನಲ್ಲಿ ಸತೀಶ್ ಜಾರಕಿಹೊಳಿಯವರ ಹೆಸರು ಕೂಡ ಕೇಳಿ ಬರುತ್ತಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದರೆ ಮುಂದಿನ ಸಿಎಂ ಯಾರು ಎನ್ನುವ ಚರ್ಚೆಗಳು ಹುಟ್ಟಿಕೊಂಡಿವೆ. ಇದರ ಬೆನ್ನಲ್ಲೆ ಸತೀಶ್ ಜಾರಕಿಹೊಳಿ ಹೆಸರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡುತ್ತಿದ್ದಾರೆ.
ಇದೇ ವೇಳೆ ಸತೀಶ್ ಜಾರಕಿಹೊಳಿಯವರು ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದು, ಸಿಎಂ ಕುರ್ಚಿ ಲಾಬಿ ಕುರಿತ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸತೀಶ್ ಜಾರಕಿಹೊಳಿಯವರು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದಕ್ಕಾಗಿ ಗುದ್ದಾಟ, ಕುಸ್ತಿ ಮಾಡೋ ಅವಶ್ಯಕತೆ ಇಲ್ಲ. ಅನೇಕರು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. 2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು. ನಾನು ಸಿಎಂ ಆಗುವ ವಿಚಾರದ ಬಗ್ಗೆ ಮುಂದೆ ನೋಡೋಣ. 2028ಕ್ಕೆ ಈ ವಿಚಾರದ ಬಗ್ಗೆ ನೋಡೋಣ ಎಂದು ಹೇಳಿದರು.
ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅಲ್ಲದೆ ಆರ್‌ವಿ ದೇಶಪಾಂಡೆ, ಪರಮೇಶ್ವರ್, ಡಿಕೆ ಶಿವಕುಮಾರ್, ಎಂಬಿ ಪಾಟೀಲ್, ಶಿವಾನಂದ ಪಾಟೀಲ್ ಹಿರಿಯರಿದ್ದಾರೆ. ಎಲ್ಲರಿಗೂ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ಹೀಗಾಗಿ ಸದ್ಯ ಈ ಪ್ರಶ್ನೆ ಉದ್ಬವಿಸಲ್ಲ. ಮುಂದೆ ನೋಡೋಣ ಎಂದು ತಿಳಿಸಿದರು.
ರಾಜ್ಯಪಾಲರು ತಮ್ಮ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿದರೆ, ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕಾನೂನಿನಲ್ಲಿ ಹೇಳಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪರ ನ್ಯಾಯ ಸಿಗುತ್ತದೆ ಎನ್ನುವ ನಂಬಿಕೆ ಇದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಸಿಎಂ ಅಧಿಕಾರದಿಂದ ಕೆಳಗಿಳಿಯಬೇಕೇ ಎಂಬ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ ಎನ್ನುವ ವಿಶ್ವಾಸವೂ ನನಗಿದೆ. ಈಗ ಸಿಎಂ ಆಗುವ ಕನಸು ಕಂಡಿಲ್ಲ. ಯಾವುದೋ ಸಂದರ್ಭದಲ್ಲಿ ಹೇಳಿಕೆ ಕೊಟ್ಟಿರುತ್ತಾರೆ. ಎಲ್ಲಿಯೂ ನಾನೇ ಸಿಎಂ ಆಗುತ್ತೇನೆಂದು ಯಾರು ಹೇಳಿಲ್ಲ. 2028ಕ್ಕೆ ಸಿಎಂ ಆಗುವ ತಯಾರಿ ಇದೆ. ಅಲ್ಲಿವರೆಗೂ ಅಭಿಮಾನಿಗಳು ಕಾಯಬೇಕು. ಸದ್ಯಕ್ಕೆ ಅಂತಹ ಆಸೆ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.
ದೆಹಲಿ ಭೇಟಿಯನ್ನು ರಾಜಕೀಯ ಎಂದು ಪರಿಗಣಿಸಬಾರದು. ಮಾಧ್ಯಮಗಳು ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದರೆ, ಜನರು ಸರ್ಕಾರದ ಮೇಲೆ ಕೋಪಗೊಳ್ಳುತ್ತಾರೆ, 2028ರಲ್ಲಿ ಸಿಎಂ ಹುದ್ದೆಗೆ ಸಿದ್ಧನಾಗುವ ಯೋಜನೆ ಇದೆಯೇ ಹೊರತು ಈಗಲ್ಲ. ನನ್ನನ್ನು ಸಿಎಂ ಆಗಿ ನೋಡಲು ಕಾತರರಾಗಿರುವ ಅವರ ಬೆಂಬಲಿಗರು ಅಲ್ಲಿಯವರೆಗೆ ಕಾಯಬೇಕು ಎಂದರು.
‘ಸತೀಶ್ ಜಾರಕಿಹೊಳಿ ನೆಕ್ಸ್ಟ್ ಸಿಎಂ’ ಎಂಬ ಆನ್‌ಲೈನ್ ಪ್ರಚಾರದ ಕುರಿತು ಪ್ರತಿಕ್ರಿಯಿಸಿ, ನನ್ನ ಬೆಂಬಲಿಗರು ಇಂತಹ ಪ್ರಚಾರವನ್ನು ಮಾಡಿದ್ದಾರೆ. ಆದರೆ, 2028 ರಲ್ಲಿ ಮುಂದಿನ ಸಿಎಂ ರೇಸ್‌ನಲ್ಲಿ ನಾನೇ ಇರುತ್ತೇನೆ ಎಂದು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 25,2026

ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 25,2026
    In ದಿನಪತ್ರಿಕೆ
  • ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
    In (ರಾಜ್ಯ ) ಜಿಲ್ಲೆ
  • ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಶಿಕ್ಷಣ ವ್ಯವಸ್ಥೆ ಪ್ರಮುಖ ಭಾಗ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಪಾಲಿಕೆ ವತಿಯಿಂದ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ನ.೨೬ರಿಂದ ಡಿ.೦೧ ರವರೆಗೆ ವಿಶೇಷ ಚೇತನರ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಕ್ರೀಡಾಕೂಟ ಸ್ಪರ್ಧೆಗಳು
    In (ರಾಜ್ಯ ) ಜಿಲ್ಲೆ
  • ಖೋ-ಖೋ ಕಾರ್ಯಾಗಾರ ಆಯೋಜನೆಯಲ್ಲಿ ಅಕ್ಕಮಹಾದೇವಿ ವಿವಿ ಮಾದರಿ
    In (ರಾಜ್ಯ ) ಜಿಲ್ಲೆ
  • ನ.೩೦ ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.