ಬಸವನ ಬಾಗೇವಾಡಿ: ಇಂದು ಶಿಕ್ಷಣ ತನ್ನ ಹಿಡಿತ ಕಳೆದುಕೊಳ್ಳುತ್ತಿರುವ ಕಾಲಘಟ್ಟದಲ್ಲಿ ಮಕ್ಕಳ ಶಿಕ್ಷಣಕ್ಕೆ ಪಾಲಕರು ದಿನದ ಒಂದಿಷ್ಟು ಸಮಯವನ್ನು ಕೊಡಬೇಕು. ಮಕ್ಕಳಲ್ಲಿ ಮೌಲ್ಯಗಳನ್ನು ತುಂಬುವಲ್ಲಿ ಪಾಲಕರು ಸಹ ಶಿಕ್ಷಕರ ಜೊತೆ ಕೈ ಜೋಡಿಸಬೇಕೆಂದು ಶಿಕ್ಷಕ ಬಾಬು ನಾಯಕ ಹೇಳಿದರು.
ಪಟ್ಟಣದ ಬಿ. ಎಲ್. ಡಿ. ಇ. ಸಂಸ್ಥೆಯ ಪಿ. ಯು. ಕಾಲೇಜಿನಲ್ಲಿ ಜರುಗಿದ ಪಾಲಕರ ಸಭೆಯಲ್ಲಿ ಪಾಲಕರ ಪ್ರತಿನಿಧಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರು ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಮಕ್ಕಳಿಗಾಗಿ ಸಮಯ ಮತ್ತು ಬದುಕನ್ನು ಮಿಸಲಿಡಬೇಕು. ಪ್ರತಿಯೊಬ್ಬ ಮಗುವಿಗೂ ಕುಟುಂಬದ ಕಷ್ಟವನ್ನು ಮನವರಿಕೆ ಮಾಡಿಕೊಡಬೇಕೆಂದು ಅಭಿಪ್ರಾಯಪಟ್ಟರು.
ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ. ವಿ. ಸೂರ್ಯವಂಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಮಕ್ಕಳನ್ನು ಕಲಿಕೆಯ ಜೊತೆಗೆ ಕ್ರೀಡಾ ಮನೋಭಾವವನ್ನು ಬೆಳೆಸಿದಾಗ ಮಾತ್ರ ಮಕ್ಕಳು ಸಾರ್ವತ್ರಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವೆಂದು ಅಭಿಪ್ರಾಯಪಟ್ಟರು.
ಪ್ರೊ. ಎಂ. ಕೆ. ಯಾದವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಆರ್. ಎ. ಪವಾರ ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಎಲ್ಲ ಶಿಕ್ಷಕರು ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

