Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ

ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಗಣೇಶೋತ್ಸವ ಆಚರಿಸಿ :ಸಿಪಿಐ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಬಲೇಶ್ವರ ಕ್ಷೇತ್ರದಲ್ಲಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
(ರಾಜ್ಯ ) ಜಿಲ್ಲೆ

ಬಬಲೇಶ್ವರ ಕ್ಷೇತ್ರದಲ್ಲಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಇದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಬುಧವಾರ ಬರಟಗಿ ಎಲ್. ಟಿ- 1 ಮತ್ತು 3 ರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ತಲಾ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗಳಿಗೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಸಿ.ಎಸ್.ಆರ್ ಅನುದಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಶಾಲೆಗಳ ಅಭಿವೃದ್ಧಿಗೆ ಬಳಸಲು ಕ್ರಮ ಕೈಗೊಂಡಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಬಡಜನರ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಸೇರಿದಂತೆ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆಗತ್ಯವಾಗಿರುವ ಪರಿಕರಗಳನ್ನು ಒದಗಿಸಲಾಗುತ್ತಿದೆ. ಅಲ್ಲದೇ, ಮತಕ್ಷೇತ್ರದಲ್ಲಿ ರಸ್ತೆಗಳ ನಿರ್ಮಾಣ, ದುರಸ್ಥಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನುಳಿದಿರುವ ಬಾಕಿ ಕಾಮಗಾರಿಗಳಿಗೂ ಅತೀ ಶೀಘ್ರದಲ್ಲಿ ಚಾಲನೆ ಸಿಗಲಿದೆ. ಅಭಿವೃದ್ಧಿ ಕೆಲಸಗಳಿಗೆ ಗ್ರಾಮಸ್ಥರೂ ಕೂಡ ಸಂಪೂರ್ಣ ಸಹಕಾರ ನೀಡುವ ಮೂಲಕ ಸಹಕರಿಸಬೇಕು ಎಂದು ಅವರು ಹೇಳಿದರು.
ಜಲಸಂಪನ್ಮೂಲ ಸಚಿವರಾಗಿದ್ದಾಗ ಎಂ. ಬಿ. ಪಾಟೀಲ ಅವರು ಕೈಗೊಂಡಿದ್ದ ನೀರಾವರಿ ಯೋಜನೆಯಿಂದಾಗಿ ಮಳೆಯಾಶ್ರಿತ ಬೆಳೆಗಳನ್ನು ಬೆಳೆಯಲು ಕಷ್ಟ ಪಡುತ್ತಿದ್ದ ರೈತರು ಇಂದು ನೀರಾವರಿ ಬೆಳೆಯಾದ ಕಬ್ಬು ಬೆಳೆಯುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಯಾಗುತ್ತಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಬಿ. ಜಿ. ಪಾಟೀಲ, ರಾಮು ರಾಠೋಡ, ಸದಾಶಿವ ಪೂಜಾರಿ, ಚನ್ನಪ್ಪ ವಾರದ, ರಾಜು ರಾಠೋಡ, ಎಸ್. ಆರ್. ನಾಯಕ, ಕಿರಣ ನಾಯಕ, ಶ್ರೀಧರ ಹೆಗಡೆ, ಗೋವಿಂದ ಶಿಂಧೆ, ನಟರಾಜ ಪತ್ತಾರ, ಹುನ್ನು ಬಾಬು ನಾಯಕ, ಕವಿತಾ ಸುಭಾಷ ರಜಪೂತ, ಸುಭಾಷ ರಜಪೂತ, ಸತೀಶ ನಾಯಕ, ಧನರಾಜ ಪತ್ತಾರ, ಆರ್. ಬಿ. ನಾಯಕ, ಮೋತಿಲಾಲ ನಾಯಕ, ಸತೀಶ ನಾಯಕ, ಅಶೋಕ ನಾಯಕ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ

ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಗಣೇಶೋತ್ಸವ ಆಚರಿಸಿ :ಸಿಪಿಐ

ಬೇಡಿಕೆ ಈಡೇರಿಕೆಗೆ ರಾಷ್ಟ್ರೀಯ ರೈತರ ಸಂಘದ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ
    In (ರಾಜ್ಯ ) ಜಿಲ್ಲೆ
  • ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಗಣೇಶೋತ್ಸವ ಆಚರಿಸಿ :ಸಿಪಿಐ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ರಾಷ್ಟ್ರೀಯ ರೈತರ ಸಂಘದ ಮನವಿ
    In (ರಾಜ್ಯ ) ಜಿಲ್ಲೆ
  • ದಾವಣಗೆರೆಗೆ ರಾಜ್ಯಮಟ್ಟದ ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ’ಅಂಬೇಡ್ಕರ್ ಓದು’ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ಇಂದು
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡರ ಮನವಿಗೆ ಸಿಎಂ ಸ್ಪಂದನೆ
    In (ರಾಜ್ಯ ) ಜಿಲ್ಲೆ
  • ಶರಣರು ಕಂಡ ಸಹಜ ಧರ್ಮ
    In ವಿಶೇಷ ಲೇಖನ
  • ಶಿಕ್ಷಕರು ದೇಶದ ನಿಜ ಆಸ್ತಿ :ಶಿವಬಸವ ಸ್ವಾಮೀಜಿ
    In (ರಾಜ್ಯ ) ಜಿಲ್ಲೆ
  • ತಳವಾರ ಸಮಾಜದ ಏಳಿಗೆ ಸಹಿಸದ ಸಚಿವ ಜಾರಕಿಹೊಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.