ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶ್ರೀ ಗಜಾನನೋತ್ಸವ ಮಹಾಮಂಡಲ ವತಿಯಿಂದ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಚಾಲನೆ ನೀಡಿದರು.
ಶಿಬಿರದಲ್ಲಿ ಜುಗತಿ ಹೆಲ್ತ್ ಕೇರ್ ಸೆಂಟರ್ ಆಸ್ಪತ್ರೆಯ ವೈದ್ಯ ಡಾ.ಅವಿನಾಶ್ ಜುಗುತಿ ಅವರಿಂದ ಆರೋಗ್ಯ ತಪಾಸಣೆ ಮಾಡಲಾಯಿತು.
ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅನೇಕರು ಭಾಗವಹಿಸಿದರು.
ಆರೋಗ್ಯ ಶಿಬಿರದಲ್ಲಿ ಸುಮಾರು ಜನ ಭಾಗವಹಿಸಿ ಇದರ ಉಪಯೋಗವನ್ನು ಪಡೆದುಕೊಂಡರು.
ಪ್ರತಿ ವರ್ಷ ಗಜಾನನ ಮಹಾಮಂಡಲ ಈ ಕಾರ್ಯ ಮಾಡುತ್ತಾ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು.

