Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಿ.ವಸಂತ ನಾಡಿಗೇರ ಪತ್ರಕರ್ತರ ಹೆಡ್ ಮಾಸ್ಟರ್
(ರಾಜ್ಯ ) ಜಿಲ್ಲೆ

ದಿ.ವಸಂತ ನಾಡಿಗೇರ ಪತ್ರಕರ್ತರ ಹೆಡ್ ಮಾಸ್ಟರ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಪ್ರತಿಕೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿ, ಅನಾರೋಗ್ಯದಿಂದ ನಿಧನರಾದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರಿಗೆ ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಇಲ್ಲಿನ ಪತ್ರಿಕಾ ಭವನದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಸಭೆ ಆರಂಭಕ್ಕೆ ಮುನ್ನ ಅಗಲಿದ ಪತ್ರಕರ್ತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಲಾಯಿತು.
ಬಳಿಕ ಪತ್ರಕರ್ತ ಅಶೋಕ ಯಡಳ್ಳಿ ಮಾತನಾಡಿ, ಕನ್ನಡ ಪ್ರತಿಕೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ವಸಂತ್ ನಾಡಿಗೇರ್ ಅವರ ಅಗಲಿಕೆ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ ಎಂದರು. ವಸಂತ ನಾಡಿಗೇರ ಅವರ ಬರವಣಿಗೆ, ಸರಳತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ತಂತ್ರಗಾರಿಕೆ ನಿಜಕ್ಕೂ ಮಾದರಿಯಾಗಿದ್ದು, ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯೋಣ ಎಂದರು.
ಪತ್ರಕರ್ತ ನವೀದ್‌ಅಂಜುಮ ಮಮದಾಪೂರ ಮಾತನಾಡಿ, ವಸಂತ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕಕ್ಕೆ ಆಗಮಿಸಿದಾಗ ಸಂಸ್ಥೆಗೆ ಮತ್ತೆ ವಸಂತ ಕಾಲ ಎಂದು ಸಂಭ್ರಮಿಸಿದ್ದೆವು. ಅವರ ಮಾರ್ಗದರ್ಶನದಲ್ಲಿ ಸಂ.ಕ ಇನ್ನಷ್ಟು ಬೆಳವಣಿಗೆಯಾಗುವ ನಿರೀಕ್ಷೆ ಇತ್ತು. ಅವರ ಅಕಾಲಿಕ ಅಗಲಿಕೆ ನೋವುಂಟು ಮಾಡಿದೆ. ಇಡೀ ಪತ್ರಿಕೋದ್ಯಮಕ್ಕೆ ಅಸ್ತಿಯಾಗಿದ್ದ ನಾಡಿಗೇರ ಯುವ ಪತ್ರಕರ್ತರಿಗೆ ಆದರ್ಶವಾಗಿದ್ದರು ಎಂದರು.
ಪತ್ರಕರ್ತ ಶರಣು ಮಸಳಿ ಮಾತನಾಡಿ, ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಮೇರು ವ್ಯಕ್ತಿತ್ವದ ಪತ್ರಕರ್ತರ ಸಾಲಿನಲ್ಲಿ ಮೊದಲು ಕಾಣಿಸಿಕೊಳ್ಳುವುದೇ ವಸಂತ ನಾಡಿಗೇರ. ಸುದ್ದಿಗಳಿಗೆ ಹೆಡ್ ಲೈನ್ ಮೂಲ ಜೀವಾಳವಾಗಿರುತ್ತದೆ. ಆ ಜೀವ ಕಳೆ ತುಂಬುವ ವಿಶಿಷ್ಟ ನೈಪುಣ್ಯತೆ ನಾಡಿಗೇರ್ ಅವರಲ್ಲಿತ್ತು ಎಂದರು.
ಗುಮ್ಮಟ ನಗರಿ ಸಂಪಾದಕ ಇರ್ಫಾನ್ ಶೇಖ ಮಾತನಾಡಿ, ಮೂರು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಕೃಷಿ ಮಾಡಿ ತಮ್ಮದೇ ಛಾಪು ಮೂಡಿಸಿದ್ದ ವಸಂತ ನಾಡಿಗೇರ ಅವರ ಅಗಲಿಕೆ ನಮಗೆಲ್ಲ ಅತೀ ನೋವಿನ ಸಂಗತಿ. ಇದು ಅವರು ಜೀವ ಬಿಡುವ ಸಮಯ ಆಗಿರಲಿಲ್ಲ. ಇನ್ನಷ್ಟು ಪತ್ರಕರ್ತರನ್ನು ತಿದ್ದುವ ಹಾಗೂ ಅವರಲ್ಲಿನ ಜ್ಞಾನವನ್ನು ಸಂಸ್ಥೆಗಳಿಗೆ, ಪತ್ರಕರ್ತರಿಗೆ ಹಂಚುವ ಸಮಯವಾಗಿತ್ತು. ಅವರ ಅಕಾಲಿಕ ನಿಧನದ ನೋವು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ದಿ.ವಸಂತ ನಾಡಿಗೇರ ಅವರು ಇಡೀ ಪತ್ರಿಕೋದ್ಯಮದ ಹೆಡ್ ಮಾಸ್ಟರ್ ಆಗಿದ್ದರು. ಅವರದ್ದು ಶ್ರೇಷ್ಠ ಬರವಣಿಗೆಯಾಗಿತ್ತು. ಕಿರಿಯ ಪತ್ರಕರ್ತರಿಗೆ ಅವರು ನೀಡುತ್ತಿದ್ದ ಮಾರ್ಗದರ್ಶನದ ಪರಿ ಚೆನ್ನಾಗಿತ್ತು. ಸರಳ ವ್ಯಕ್ತಿತ್ವ ಎಲ್ಲರೊಂದಿಗೂ ಬೆರೆಯುವ, ಮೃದು ಮನಸ್ಸಿನ ಮೇಧಾವಿ ಪತ್ರಕರ್ತನನ್ನು ಕಳೆದುಕೊಂಡ ಕನ್ನಡ ಪತ್ರಿಕೋದ್ಯಮಕ್ಕೆ ಭರಿಸಲಾಗದ ನಷ್ಟ ಉಂಟಾಗಿದೆ. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದರು.
ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಖಜಾಂಚಿ ರಾಹುಲ್ ಆಪ್ಟೆ, ಕಾರ್ಯದರ್ಶಿ ಅವಿನಾಶ ಬಿದರಿ, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಶಶಿಕಾಂತ ಮೆಂಡೆಗಾರ, ಗುರು ಗದ್ದನಕೇರಿ, ಸಮೀರ ಇನಾಮದಾರ, ಕಾನಿಪ ಸದಸ್ಯರಾದ ಶರಣು ಮರನೂರ, ಸಿದ್ದು, ಪ್ರಕಾಶ ಹಡಪದ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.