ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹುಬ್ಬಳ್ಳಿಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಕೊಡ ಮಾಡುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪ್ರಶಸ್ತಿಗೆ ಭಾಜನರಾದ ಕೇಂದ್ರದ ಮಾಜಿ ಸಚಿವರು ಹಾಗೂ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳರ ಪರವಾಗಿ ಅವರ ಪುತ್ರ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಅವರು, ಗುರುವಾರ ಹುಬ್ಬಳ್ಳಿಯ ಜೆ.ಸಿ.ನಗರದ ಅಕ್ಕನ ಬಳಗ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.

