ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ತಾಂತ್ರಿಕ ವಿಭಾಗದಲ್ಲಿ ಒಂದು “ಜ್ಯೂನಿಯರ್ ಇಂಜಿನಿಯರ್ (ವಿದ್ಯುತ್)” ಹಾಗೂ ಆರೋಗ್ಯ ಕೇಂದ್ರದ ಅಂಬ್ಯುಲನ್ಸ್ ವಾಹನಕ್ಕೆ ಒಂದು “ವಾಹನ ಚಾಲಕ” ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇದೇ ದಿ. ೧೭ ರಂದು ಮಧಾಹ್ನ ೦೩:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರ್ಪಡಿಸಲಾಗಿರುವ ನೇರ ಸಂದರ್ಶನಕ್ಕೆ ಮೂಲ ದಾಖಲಾತಿಗಳು ಮತ್ತು ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾನೂನು ಸಲಹೆಗಾರ:
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಕಾನೂನು ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದೇ ಸೆ.೧೭ ರಂದು ವಿವಿಯ ಆಡಳಿತ ಭವನದ ಸಿಂಡಿಕೇಟ್ ಹಾಲ್‌ನಲ್ಲಿ ಬೆಳಿಗ್ಗೆ ೧೧.೦೦ ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್‌ಸೈಟ್ ತಿತಿತಿ.ಞsತಿu.ಚಿಛಿ.iಟಿಗೆ ಭೇಟಿ ನೀಡಬಹುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

